ಮಂಡ್ಯ

ಶಿಕ್ಷಕರ ಸಮಸ್ಯೆ ಬಗೆಹರಿಸಲು ಬದ್ಧ ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಇಂದು (ಮಾ.1) ರಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಅಧಿವೇಶನ ಮಾತೆ “ಸಾವಿತ್ರಿಬಾಯಿ ಫುಲೆ” ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರಿಗೆ ಜವಾಬ್ದಾರಿ ಹೆಚ್ಚಿದೆ ಕಾಲ ಕಾಲಕ್ಕೆ ತಕ್ಕಂತೆ ಶಿಕ್ಷಕರು ತಮ್ಮಲ್ಲಿ ಅಧ್ಯಯನಶೀಲತೆ ಬೆಳೆಸಿಕೊಳ್ಳಬೇಕು ಎಂದರು.

ಮಕ್ಕಳಿಗೆ ಸಾಮಾನ್ಯ ಜ್ಞಾನ, ಸಾಮಾಜದ ಸ್ಥಿತಿಗತಿಗಳನ್ನು ಅರ್ಥಪೂರ್ಣವಾಗಿ ಅರ್ಥ ಮಾಡಿಸಬೇಕು, ಶಾಲೆಯಲ್ಲಿ ಅಭ್ಯಾಸಿಸುತ್ತಿರುವ ಮಕ್ಕಳನ್ನೆಲ್ಲ ಶಿಕ್ಷಕರು ತಮ್ಮ ಮಕ್ಕಳೆಂಬ ಭಾವನೆಯಿಂದ ನೋಡಿಕೊಳ್ಳಿ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಂಸ್ಕಾರ ನೀಡಿ. ಮುಂದಿನ ದಿನಗಳಲ್ಲಿ ಅವರಲ್ಲಿ ಸಮಾಜದಲ್ಲಿರುವ ಇರುವ ತಪ್ಪುಗಳನ್ನು ತಿದ್ದುವ ಸಾಮರ್ಥ್ಯ ಬೆಳೆಯಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದಡ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ ಜಗತ್ತಿನಲ್ಲಿ ಶಿಕ್ಷಣ ಹಾಗೂ ಜ್ಞಾನವೆಂಬುದು ನಿರಂತರವಾಗಿ ಆಸಕ್ತರ ಆಸ್ತಿಯಾಗಿರುತ್ತದೆ. ಕದಿಯಲು ಸಾಧ್ಯವಾಗದ ಸಂಪತ್ತು ಶಿಕ್ಷಣ, ಅಂತಹ ಶಿಕ್ಷಣವನ್ನು ನೀಡಲು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯ, ಶಿಕ್ಷಕರು ಯಾವುದೇ ಭಯಪಡದೆ ಕಾರ್ಯ ನಿರ್ವಾಹಿಸಿ ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳನ್ನು ಪ್ರಣಾಳಿಕೆಯಲ್ಲಿ ಲಿಖಿತವಾಗಿ ದಾಖಲಿಸಿದ್ದಾರೆ, ಸಾಧ್ಯವಾದಷ್ಟು ಬೇಗ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ಶಿಕ್ಷಕರಿಗೆ ಇರುವ ಸಮಸ್ಯೆಗಳು ನಮ್ಮ ಗಮನಕ್ಕೆ ಬಂದಿದೆ, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕರು ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ಉತ್ತಮ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ದ್ದಾರೆ ಎಂಬುದನ್ನು ಉತ್ತಮ ಫಲಿತಾಂಶ ನೀಡಿ ನಿರೂಪಿಸಿ‌, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ಮುಖ್ಯ ಮಂತ್ರಿಗಳು ನೀಡಿದ್ದಾರೆ, ಈ ಭಾರಿ ಸುಮಾರು 15 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಹೋರಾಟ ಮಂಡ್ಯದಲ್ಲಿಯೇ ನಿಲ್ಲಬೇಕು, ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯ ಮಂತ್ರಿಗಳಿಗೆ ಮನವಿ ಮಾಡುತ್ತೇನೆ, ಶಿಕ್ಷಕರ ಪರವಾಗಿ ಸರ್ಕಾರ ಇದೆ ಎಂದು ಹೇಳಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ ಶಿಕ್ಷಣ ವೃತ್ತಿಯಿಂದ ಮಾತ್ರ ಹಲವು ವೃತ್ತಿಗಳನ್ನು ಹುಟ್ಟುಹಾಕಲು ಸಾಧ್ಯ, ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸುವ ಹೊಣೆ ನಮ್ಮೇಲ್ಲರ ಮೇಲೆ ಇದೆ, ಸರ್ಕಾರಿ ಶಾಲೆಗಳ ಮೇಲೆ ಜನರಿಗೆ ಇರುವ ತಾತ್ಸಾರ ಭಾವನೆ ಹೋಗಲಾಡಿಸಬೇಕು, ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲೂ ಸಹ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕಾಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಶಿಕ್ಷಕರು ಸದಾ ಕ್ರಿಯಾಶೀಲವಾಗಿ ಕಾರ್ಯ ನಿರ್ವಾಹಿಸಬೇಕು ಹಾಗೀ ತಮ್ಮ ಆರೋಗ್ಯದ ಕಡೆ ಗಮನಹರಿಸಿ, ಪುಸ್ತಕದ ಪಾಠವನ್ನು ಎಲ್ಲರೂ ಮಾಡ್ತಾರೆ ಆದರೆ ಮಕ್ಕಳಿಗೆ ಜೀವನ ಪಾಠವನ್ನು ಹೇಳಿಕೊಡುವುದು ಶಿಕ್ಷಕರಿಂದ ಮಾತ್ರ ಸಾಧ್ಯ, ಮುಖ್ಯವಾಗಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಸಹಕಾರಿಸಬೇಕು ಇಲ್ಲವಾದಲ್ಲಿ ನೀವು ಆದರ್ಶ ಶಿಕ್ಷಕರಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚೆಸ್ಕಾಂ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ರಾಜ್ಯಾಧ್ಯಕ್ಷ ಕೆ. ನಾಗೇಶ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

14 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago