ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ ಉದಯ್ ತಿಳಿಸಿದ್ದಾರೆ.
ಭಾರತಿನಗರ ಸಮೀಪದ ಕೂಳಗೆರೆ ಏತ ನೀರಾವರಿ ಬಿಂದುವಿನ ಉನ್ನತೀಕರಣ ಮತ್ತು ಪುನರುಜ್ಜೀವನಗೊಳಿಸುವ ಕಾಮಗಾರಿ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆರೆ ತುಂಬಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಮದ್ದೂರು ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವನ್ನು ವಹಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಹಾಗೂ ಕಾಲುವೆ ನೀರಾವರಿಗಳಿಂದ ಕೆರೆಗಳಿಗೆ ನೀರು ತುಂಬುವುದರಿಂದ ಅಂತರ್ಜಲ ವೃದ್ಧಿಯಾಗಿ ರೈತರ ಬೋರ್‌ವೆಲ್‌ಗಳಲ್ಲಿ ನೀರು ಹೆಚ್ಚು ವೃದ್ಧಿಸಲಿದರೆ, ಉತ್ತಮ ಬೆಳೆದು ಹೆಚ್ಚಿನ ಆದಾಯ ಪಡೆಯಲು ವರದಾನವಾಗಲಿದೆ ಎಂದು ತಿಳಿಸಿದರು
ಶಿಂಷಾ ನದಿ ತೀರದ ಕೂಳಗೆರೆಯಿಂದ ಮಲ್ಲನಕುಪ್ಪೆವರೆಗೆ ಮಳೆ ಹಾಗೂ ಬೋರ್ ವೆಲ್ ಆಶ್ರಿತ ಪ್ರದೇಶವಾಗಿರುವುದರಿಂದ ಈ ಭಾಗದ ಕೆರೆಗಳ ಅಭಿವೃದ್ಧಿ ಹಾಗೂ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಜತೆಗೆ ಮುಂದೆ ಈ ಭಾಗದಲ್ಲಿ ಎಂದಿಗೂ ಕುಡಿಯಲು ಮತ್ತು ಬೇಸಾಯ ಮಾಡಲು ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಬೇಸಿಗೆ ಆರಂಭವಾಗಿದೆ. ನೀರಿನ ಭವಣೆ ನೀಗಿಸಲು ಈಗಾಗಲೇ ಅಧಿಕಾರಿಗಳ ಜತೆಯಲ್ಲಿ ಹಲವಾರು ಬಾರಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಶಾಶ್ವತವಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೂಳಗೆರೆ ಏತ ನೀರಾವರಿಗೆ 1977ರಲ್ಲಿ ಚಾಲನೆ ಆಗಿತ್ತು. ಆದರೆ ಅಲ್ಲಿಂದ ಇಲ್ಲಿಯವರೆಗೆ ರೈತರಿಗೆ ಈ ಯೋಜನೆಯಿಂದ ಸಮರ್ಪಕವಾಗಿ ಅನುಕೂಲವಾಗುತ್ತಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ನನ್ನ ಗಮನಕ್ಕೆ ತಂದ ಕಾರಣ ಯೋಜನೆಗೆ ಎರಡೂವರೆ ಕೋಟಿ ರೂ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಿ ಸುಮಾರು ೨೧೦೦ ಎಕೆರೆ ಜಮೀನಿಗೆ ನೀರುಣಿಸುವ ಕಾಮಗಾರಿ ಆಗಿದ್ದು ಇದರ ಉಪಯೋಗವನ್ನು ರೈತರು ಸಮರ್ಪಕವಾಗಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಸಧೃಡವಾಗಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೆ ಸಂದರ್ಭದಲ್ಲಿ ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಚಲುವರಾಜು, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ಮೋಹನ್, ನವೀನ್, ಸಹಾಯಕ ಅಭಿಯಂತರ ಚೈತ್ರ, ಪಿಡಿಒ ರಾಜಣ್ಣ, ಮುಖಂಡರಾದ ಶ್ರೀನಿವಾಸ , ಕೃಷ್ಣ, ಜಯರಾಮು, ಕೆಂಪರಾಜು, ಗುತ್ತಿಗೆದಾರ ರಮಣರೆಡ್ಡಿ ಸೇರಿದಂತೆ ಹಲವರು ಮತ್ತಿತರಿದ್ದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…