ಮಂಡ್ಯ

ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಬದ್ಧ : ಶಾಸಕ ಉದಯ್‌

ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ ಉದಯ್‌ ತಿಳಿಸಿದ್ದಾರೆ.

ಭಾರತಿನಗರ ಸಮೀಪದ ಕೂಳಗೆರೆ ಏತ ನೀರಾವರಿ ಬಿಂದುವಿನ ಉನ್ನತೀಕರಣ ಮತ್ತು ಪುನರುಜ್ಜೀವನಗೊಳಿಸುವ ಕಾಮಗಾರಿ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆರೆ ತುಂಬಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಮದ್ದೂರು ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವನ್ನು ವಹಿಸಲಾಗುವುದು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಹಾಗೂ ಕಾಲುವೆ ನೀರಾವರಿಗಳಿಂದ ಕೆರೆಗಳಿಗೆ ನೀರು ತುಂಬುವುದರಿಂದ ಅಂತರ್ಜಲ ವೃದ್ಧಿಯಾಗಿ ರೈತರ ಬೋರ್‌ವೆಲ್‌ಗಳಲ್ಲಿ ನೀರು ಹೆಚ್ಚು ವೃದ್ಧಿಸಲಿದರೆ, ಉತ್ತಮ ಬೆಳೆದು ಹೆಚ್ಚಿನ ಆದಾಯ ಪಡೆಯಲು ವರದಾನವಾಗಲಿದೆ ಎಂದು ತಿಳಿಸಿದರು

ಶಿಂಷಾ ನದಿ ತೀರದ ಕೂಳಗೆರೆಯಿಂದ ಮಲ್ಲನಕುಪ್ಪೆವರೆಗೆ ಮಳೆ ಹಾಗೂ ಬೋರ್ ವೆಲ್ ಆಶ್ರಿತ ಪ್ರದೇಶವಾಗಿರುವುದರಿಂದ ಈ ಭಾಗದ ಕೆರೆಗಳ ಅಭಿವೃದ್ಧಿ ಹಾಗೂ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಜತೆಗೆ ಮುಂದೆ ಈ ಭಾಗದಲ್ಲಿ ಎಂದಿಗೂ ಕುಡಿಯಲು ಮತ್ತು ಬೇಸಾಯ ಮಾಡಲು ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಬೇಸಿಗೆ ಆರಂಭವಾಗಿದೆ. ನೀರಿನ ಭವಣೆ ನೀಗಿಸಲು ಈಗಾಗಲೇ ಅಧಿಕಾರಿಗಳ ಜತೆಯಲ್ಲಿ ಹಲವಾರು ಬಾರಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಶಾಶ್ವತವಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೂಳಗೆರೆ ಏತ ನೀರಾವರಿಗೆ 1977ರಲ್ಲಿ ಚಾಲನೆ ಆಗಿತ್ತು. ಆದರೆ ಅಲ್ಲಿಂದ ಇಲ್ಲಿಯವರೆಗೆ ರೈತರಿಗೆ ಈ ಯೋಜನೆಯಿಂದ ಸಮರ್ಪಕವಾಗಿ ಅನುಕೂಲವಾಗುತ್ತಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ನನ್ನ ಗಮನಕ್ಕೆ ತಂದ ಕಾರಣ ಯೋಜನೆಗೆ ಎರಡೂವರೆ ಕೋಟಿ ರೂ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಿ ಸುಮಾರು ೨೧೦೦ ಎಕೆರೆ ಜಮೀನಿಗೆ ನೀರುಣಿಸುವ ಕಾಮಗಾರಿ ಆಗಿದ್ದು ಇದರ ಉಪಯೋಗವನ್ನು ರೈತರು ಸಮರ್ಪಕವಾಗಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಸಧೃಡವಾಗಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೆ ಸಂದರ್ಭದಲ್ಲಿ ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಚಲುವರಾಜು, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ಮೋಹನ್, ನವೀನ್, ಸಹಾಯಕ ಅಭಿಯಂತರ ಚೈತ್ರ, ಪಿಡಿಒ ರಾಜಣ್ಣ, ಮುಖಂಡರಾದ ಶ್ರೀನಿವಾಸ , ಕೃಷ್ಣ, ಜಯರಾಮು, ಕೆಂಪರಾಜು, ಗುತ್ತಿಗೆದಾರ ರಮಣರೆಡ್ಡಿ ಸೇರಿದಂತೆ ಹಲವರು ಮತ್ತಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

19 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

19 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

19 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

19 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

19 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

19 hours ago