ಮಂಡ್ಯ

ಏ.13 ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ: ಪ್ರಜ್ವಲ್ ಮೌರ್ಯ

ಮಂಡ್ಯ: ಅಧ್ಯಯನ ಭೋದಿ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್‌ ಮತ್ತು ಮೈತ್ರಿ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವುದು ಹೇಗೆ ಎಂಬ ವಿಷಯದ ಕಾರ್ಯಾಗಾರವನ್ನು ಏಪ್ರಿಲ್ 13ರ ಬೆಳಿಗ್ಗೆ 10.30ಕ್ಕೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ನಿರ್ದೇಶಕ ಪ್ರಜ್ವಲ್ ಮೌರ್ಯ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈತ್ರಿ ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸದರಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲಕರ ರೀತಿಯ ಕಾರ್ಯಕ್ರಮ ಒದಗಿಸುವ ನಿಟ್ಟಿನಲ್ಲಿ ಸದರಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದು, ಶೈಕ್ಷಣಿಕ ಕ್ಷೇತ್ರದ ಸಾಧಕರ ಭಾವಚಿತ್ರಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಪುಷ್ಪಾರ್ಚನೆ ನೆರವೇರಿಸುವರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಆಯ್ಕೆ ಬಗ್ಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜುನ ಸಹಾಯಕ ಪ್ರಾಧ್ಯಾಪಕ ಡಾ.ಲಕ್ಷ್ಮಣ್ ಮಾರ್ಗದರ್ಶನ ನೀಡುವರು ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕುರಿತು ಅಕ್ಕ ಐಎಎಸ್ ಅಕಾಡೆಮಿಯ ಖ್ಯಾತ ಐಎಎಸ್ ತರಬೇತುದಾರ ಹಾಗೂ ಮುಖ್ಯಸ್ಥ ಡಾ.ಶಿವಕುಮಾರ್ ಹಾಗೂ ಮದ್ದೂರಿನ ಹೆಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ರಾವಣೀಕರ್ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವರು ಎಂದರು.

ಕಾರ್ಯಾಗಾರಕ್ಕೆ ಪಾಲ್ಗೊಳ್ಳುವವರ ನೋಂದಣಿಗೆ 100 ರೂ.ಗಳ ಶುಲ್ಕ ನಿಗದಿ ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವನ್ನು ಕೋರಿಕೆಯ ಮೇರೆಗೆ ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

26 mins ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

1 hour ago

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

2 hours ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

3 hours ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

3 hours ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

4 hours ago