Mysore
22
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್. ಚಲುವರಾಯಸ್ವಾಮಿ

N Cheluvarayaswamy

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದರು.

ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು.

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು ಹೇಳಿದರು.

ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ರಾಷ್ಟೀಯ ಹೆದ್ದಾರಿ 150 A ರಲ್ಲಿ ಕೆ.ಬಿ ಕ್ರಾಸ್ ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೇಲು ಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಇದೇ ರೀತಿ ಚಾಮರಾಜನಗರ ಜೇವರ್ಗಿ ರಸ್ತೆಯಲ್ಲಿ ಹೊಸಮನೆಯಿಂದ ಪಾಂಡವಪುರ ಮಾರ್ಗದ ದ್ವಿಪತ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ವಿಸ್ತರಿಸುವ ಕಾಮಗಾರಿಯನ್ನು ಸಹ ಆದಷ್ಟು ಬೇಗನೇ ಪೂರ್ಣಗೊಳಿಸುವಂತೆ ತಿಳಿಸಿದರು.

ರಾಷ್ಟೀಯ ಹೆದ್ದಾರಿ 150 A ಮಾರ್ಗದಲ್ಲಿ ನಾಗಮಂಗಲ ಬಳಿ 300 ಕೋಟಿ ವೆಚ್ಚದಲ್ಲಿ ಹೊರಹೊರ್ತುಲ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಅಂತಿಮಗೊಳಿಸುವಂತೆ ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು.

Tags:
error: Content is protected !!