ಮಂಡ್ಯ

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು.

ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು.

ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೆ ಮಂಡ್ಯ ಜಿಲ್ಲೆಯ ಗಡಿಯ ಆರಂಭದಲ್ಲೆ ಸಂಪರ್ಕಿತ ಸರ್ವಿಸ್ ರಸ್ತೆಗೆ ಎಂಟ್ರಿ ಹಾಗೂ ಎಕ್ಸಿಟ್ ಗಳನ್ನು ವೈಜ್ಞಾನಿಕವಾಗಿ ನಿರ್ಮಿಸುವಂತೆ ಹಾಗೂ ಮದ್ದೂರು ಹೆದ್ದಾರಿ ಬಳಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಡ್ರೈನೇಜ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.‌

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 150 A ಪಾಂಡವಪುರ- ನಾಗಮಂಗಲ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳಿದ್ದು, ಸಂಚಾರ ಮಾಡಲು ಅಸಾಧ್ಯವಾಗಿದ್ದು, ಶೀಘ್ರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ಶ್ರೀರಂಗಪಟ್ಟಣದಿಂದ ಕುಶಾಲನಗರದವರೆಗೆ 92 ಕಿಲೋಮೀಟರ್ ರಾಷ್ಟೀಯ ಹೆದ್ದಾರಿ ಹಾದುಹೋಗಲಿದ್ದು, ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ, ಭೂಸ್ವಾಧೀನ ಪ್ರಕ್ರಿಯೆ ಆದಷ್ಟು ಬೇಗ ಮುಗಿಸಿ ಕಾಮಗಾರಿ ಅನುಷ್ಠಾನ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

NH 7 ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಹಾದುಹೋಗಲಿದ್ದು, ಬೆಳ್ಳೂರು ಕ್ರಾಸ್ ಬಳಿ ಸಂಪರ್ಕಿತ ಸರ್ವಿಸ್ ರಸ್ತೆಯನ್ನು ಅಗಲೀಕರಿಸುವಂತೆ ಹಾಗೂ ನಾಗಮಂಗಲ ಬೈಪಾಸ್ ರಸ್ತೆ ಮತ್ತು ಚುಂಚನಗಿರಿ- ಹೊಸಮನೆ ರಸ್ತೆ ಕಾಮಗಾರಿ, ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಇತರ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ, ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗುವ ಬಾಕಿ ಉಳಿದ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿಯವರು ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

5 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

9 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

16 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago