ಮಂಡ್ಯ

ಮಂಡ್ಯ | ದಲಿತ ಸಂಘಟನೆಗಳ ಬಗ್ಗೆ ಅನ್ನದಾನಿ ಹೇಳಿಕೆಗೆ ಖಂಡನೆ

ಮಂಡ್ಯ: ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾಒಕ್ಕೂಟ ಖಂಡಿಸುತ್ತದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಕುರಿತು ಆಡಿದ ಅಪಮಾನದ ಮಾತುಗಳ ವಿರುದ್ಧ ದಲಿತ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಬಗ್ಗೆ ಈ ರೀತಿ ಮಾತನಾಡಿರುವುದು ಸರಿಯಲ್ಲ ಎಂದು ಖಂಡನೆ ವ್ಯಕ್ತಪಡಿಸಿದರು.

ಸಾಹಿತ್ಯ ಸಮ್ಮೇಳನದಂತ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಹುಜನರ ಆಹಾರದ ಹಕ್ಕನ್ನು ನಿರಾಕರಿಸುವ ಅನ್ನದಾನಿ ಯಾವ ಮನುವಾದಿಗೂ ಕಡಿಮೆಯಿಲ್ಲ,ಅಧಿಕಾರಕ್ಕಾಗಿ ಆತ ಯಾರ ಮನೆ ಬಾಗಿಲಾದರೂ ಕಾಯಲಿ. ಆದರೆ ದಲಿತರ ಸ್ವಾಭಿಮಾನಿ ಹೋರಾಟವನ್ನು ಅಪಮಾನಗೊಳಿಸುವ ಹೀನ ಪ್ರಯತ್ನ ನಿಲ್ಲಿಸಬೇಕು. ತಮ್ಮಹೇಳಿಕೆಗೆ ಸಾಕ್ಷ್ಯಾ ಒದಗಿಸಬೇಕು ಇಲ್ಲವೆ ಜಿಲ್ಲೆಯ ದಲಿತ ಸಮುದಾಯವನ್ನು ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಜನವರಿ ೦೭ರಂದು ಮಂಡ್ಯ ಬಂದ್‌ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ ವರ್ತಕರಿಗೆ, ನಾಗರೀಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಮಹಾ ಒಕ್ಕೂಟದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.

ಕದಸಂಸದ ಸೋಮನಹಳ್ಳಿ ಅಂದಾನಿ ಮಾತನಾಡಿ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಓಲೈಸುವ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸಿದ್ದಾಂತವೆ ಈ ರಾಜ್ಯದಲ್ಲಿ ಅಂತಿಮ ಎಂದಿದ್ದಾರೆ ಆದರೆ ರಾಜ್ಯ ಮಾತ್ರವಲ್ಲ ದೇಶದ ಒಕ್ಕೂಟ ವ್ಯವಸ್ಥೆಗೆ ಸಂವಿಧಾನ ಕೊಟ್ಟ ಅಂಬೇಡ್ಕರ್ ರವರ ಸಿದ್ದಾಂತ ಗೌರವಾರ್ಹವಾಗಿದೆ.ಆದರೆ ಅಧಿಕಾರದ ಹಪಾಹಪಿಯಿಂದ ಶಾಸಕರು ಇಂತಹ ಬಾಲಬಡುಕ ಹೇಳಿಕೆಗಳನ್ನು ಕೊಡಬಾರದು ಅದೇ ರೀತಿ ತಮ್ಮನ್ನು ಅಧಿಕಾರಕ್ಕೇರಿಸಿದ ಸಿದ್ದಾಂತಕ್ಕೆ ನಿಷ್ಠೆಯಿಂದ ಇರಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಅನ್ನದಾನಿ ಮತ್ತು ಹಾಲಿ ಶಾಸಕ ನರೇಂದ್ರ ಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಮ ಸಮಾಜ ಸಂಘಟನೆಯ ನರಸಿಂಹಮೂರ್ತಿ, ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ಅಧ್ಯಕ್ಷ ಗಂಗರಾಜು, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ ವಿ ಕೃಷ್ಣ, ಸಂವಿಧಾನ ಬಳಗದ ಅನಿಲ್ ಕಿರುಗಾವಲು ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago