ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು.
ನಗರದದಲ್ಲಿ ಮಂಗಳವಾರ(ಜು.16) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏಳು ಡಿ ಕಾಯ್ದೆಯನ್ನು ರದ್ದುಗೊಳಿಸಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ತಂತ್ರವನ್ನು ಬಳಸಿದ್ದಾರೆ. ಈ ಗ್ಯಾರಂಟಿ ಯೋಜನೆಗೆ ಸಂಪನ್ಮೂಲ ಕ್ರೂಡೀಕರಣದ ಬಗ್ಗೆ ತಿಳಿಸಿಲ್ಲ. 40,000 ಕೊಟ್ಟಿ ಆದಾಯವನ್ನು ಸಂಗ್ರಹಿಸುತ್ತೇವೆ ಎಂದು ತಿಳಿಸಿದ್ದರು. ಆದರೆ ಎಸ್ ಸಿಸಿ, ಎಸ್ ಟಿ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ 11,444ಕೋಟಿ ರೂಪಾಯಿಗಳನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಕಿಡಿಕಾರಿದರು.
ಎರಡು ವರ್ಷದಲ್ಲಿ ದಲಿತರ 25,000 ಕೋಟಿ ರೂಪಾಯಿ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಿಡಿಕಾರಿದ ಅವರು, 7 ಡಿ ಕಾಯ್ದೆ ತೆಗೆಯಲು ನಾನು ಹೋರಾಟ ಮಾಡಿದ್ದೆ. ಅದನ್ನು ತೆಗೆದು 7 ಸಿ ಕಾಯ್ದೆ ಬಳಸಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಗಿದೆ .ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕಿಡಿ ಕಾರಿದರು.