ಮಂಡ್ಯ

ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಸಬಲೀಕರಣ: ಎನ್ ಚಲುವರಾಯಸ್ವಾಮಿ

ಮಂಡ್ಯ: ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರನ್ನು ಸಬಲೀಕರಣಗೊಳಿಸುವ ಸರ್ಕಾರ ಸಿಎಂ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ನಾಗಮಂಗಲ ತಾಲೂಕಿನ ಸವಲತ್ತು ವಿತರಣಾ ಸಮಾವೇಶ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 35000 ಕೋಟಿ 5 ಗ್ಯಾರಂಟಿ ಯೋಜನೆಗಳ ಮೂಲಕ ಒಂದಲ್ಲ ಒಂದು ರೀತಿ ಎಲ್ಲರಿಗೂ ತಲುಪಿಸಲಾಗಿದೆ. ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆ ಅಂದಾಜು 5000 ರೂ ಸೌಲಭ್ಯ ದೊರಕಿಸಲಾಗುತ್ತಿದೆ. ಮುಂದಿನ ಆರ್ಥಿಕ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56000 ಕೋಟಿ ರೂ ಹಣವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ‌ ಎಂದರು‌.

ನಾಗಮಂಗಲ ತಾಲೂಕಿನಲ್ಲಿ 35 ವರ್ಷಗಳಿಂದಲೂ ಇದ್ದ ಸಮಸ್ಯೆಯನ್ನು ಪರಿಹರಿಸಿ ಹಕ್ಕಿಪಿಕ್ಕಿ ಜನಾಂಗದವರಿಗೆ ಇಂದು ಹಕ್ಕು ಪತ್ರವನ್ನು ನೀಡಿಲಾಯಿತು ಎಂದರು

ಕೃಷಿ ಇಲಾಖೆಯಿಂದ ರಾಜ್ಯದಲ್ಲಿ ಸುಮಾರು 15 ರಿಂದ 20 ಲಕ್ಷ ರೈತರಿಗೆ ಬೆಳೆ ವಿಮೆ ಸೇರಿದಂತೆ ವಿವಿಧ ಯೋಜನೆಯಡಿ 2500 ಕೋಟಿ ರೂ ಹಣವನ್ನು ನೀಡಲಾಗಿದೆ ಎಂದರು.

ಕೃಷಿ ಇಲಾಖೆಯಲ್ಲಿ ಈ ಮೊದಲು ಕಳಪೆ ಬೀಜ, ಗೊಬ್ಬರ ಸರಿಯಾದ ರೀತಿ ಸೌಲಭ್ಯಗಳು ದೊರಕುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿತ್ತು. ಕೃಷಿ ಸಚಿವನಾಗಿ ಇವುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ದೂರುಗಳು ಬಾರದಂತೆ ರೈತರಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಅಪಾರವಾದ ಕೊಡುಗೆಯನ್ನು ಜಯಚಾಮರಾಜೇಂದ್ರ ಒಡೆಯರ್ ರವರು ನೀಡಿದ್ದು, ಅವರನ್ನು ಬಿಟ್ಟರೆ 70 ವರ್ಷಗಳ ನಂತರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ ಎಂದರು.

ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿಯೇ ಮೆಡಿಕಲ್ ಕಾಲೇಜು, ಕೆ ಎಸ್ ಆರ್ ಟಿ ಸಿ ಡಿವಿಸನ್, ಆರ್ ಟಿ ಓ ಆಫೀಸ್, ಪೊಲೀಸ್ ಸ್ಟೇಷನ್, ಮಿನಿ ವಿಧಾನಸೌಧವನ್ನು ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಜಿಲ್ಲೆಯಲ್ಲಿ ಹೊಸ ಸಕ್ಕರೆ ಫ್ಯಾಕ್ಟರಿಯನ್ನು ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಜಿಲ್ಲೆಯ ಮುಖಂಡರು, ಶಾಸಕರು, ಅಭಿವೃದ್ಧಿಯ ಕಾರ್ಯಗಳು ಶೀಘ್ರವಾಗಿ ಪೂರ್ಣಗೊಳಿಸಲು ಕೈಜೋಡಿಸಬೇಕು ಎಂದರು.

ಜಿಲ್ಲಾ ಸಚಿವನಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕುಂದು ಕೊರತೆಗಳಿಗೆ ಸ್ಪಂದಿಸಿ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಬೆಳೆ ವಿಮೆ ಈ ವರ್ಷ 25 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು ಮಾರ್ಚಿ ಅಂತ್ಯದೊಳಗೆ ಒಟ್ಟಾರೆ 13 ಲಕ್ಷ ರೈತರಿಗೆ ರೂ.1400ಕೋಟಿಗಳ ವಿಮೆ ಹಣ ಪಾವತಿಯಾಗಲಿದೆ ಈಗಾಗಲೇ 8 ಲಕ್ಷ ರೈತರಿಗೆ ರೂ.600 ಕೋಟಿಗಳ ವಿಮೆ ಹಣ ಪಾವತಿಯಾಗಿದೆ. ಉಳಿದ 800 ಕೋಟಿ ರೂ ಅನುದಾನವು ಮಾರ್ಚ್ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಏಳುವರೆ ಸಾವಿರ ಕೃಷಿ ಹೋಂಡಾ ಗಳನ್ನು ನಿರ್ಮಾಣ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ 20 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು ಎಂದರು.

ಉದ್ಯಮಿ ವೆಂಕಟರಮಣಗೌಡ( ಸ್ಟಾರ್ ಚಂದ್ರು), ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ. ನಾಗೇಶ್, ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಪಾಂಡವಪುರ ಉಪ ವಿಭಾಗಾಧಿಕಾರಿ ಜೆ.ವಿ.ಮಾರುತಿ, ತಹಶೀಲ್ದಾರ್ ನಯೀಂಉನ್ನೀಸಾ, ತಾ.ಪಂ. ಇಓ ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ಬಿ.ಆರ್.ಸಿ. ಸಮನ್ವಯಾಧಿಕಾರಿ ಕೆ.ರವೀಶ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಪ್ರಕಾಶ್ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲೂಕು ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

7 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago