ಮಂಡ್ಯ: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.
ಇಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನು ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ. ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: ಯಶಸ್ವಿ ದಸರಾ ಆಯೋಜನೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಸಿಎಂ
ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು.
ಇನ್ನು ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ನಮ್ಮ ಕೆಲಸ. ಕಾಂಗ್ರೆಸ್ ಅತೀ ಹೆಚ್ಚು ಸ್ಥಾನವನ್ನು ಗಳಿಸುವ ಮೂಲಕ ಅಧಿಕಾರ ಪಡೆದಿದೆ, ನಮ್ಮ ಪಕ್ಷ ಎಲ್ಲರಿಗೂ ಅವಕಾಶ ಕೊಟ್ಟು ಬೆಂಬಲಿಸುತ್ತಿದೆ. ರೈತರ ಸಾಲ ಮನ್ನಾ ಕ್ಕೆ ನೂರಾರು ಕೋಟಿಯನ್ನು ನೀಡಿದೆ, ನಮ್ಮ ಸರ್ಕಾರ ಬಂದ ಮೇಲೆ ಬದಲಾವಣೆ ಬೆಳಕಾಗಿದೆ. ಈಗಾಗಲೇ ಡಿಸಿಸಿ ಬ್ಯಾಂಕ್‌ನ 12ರಲ್ಲಿ 8 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದನ್ನು ಓದಿ; ಯಶಸ್ವಿ ದಸರಾ ಆಯೋಜನೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಸಿಎಂ
ಜಿಲ್ಲೆಯಲ್ಲಿ ಜೆಡಿಎಸ್ ಭದ್ರವಾಗಿದ್ದರು ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದೆ. ಚುನಾವಣೆ ಗೆದ್ದಾಗ ಹಿಗ್ಗುವುದು, ಸೋತಾಗ ಓಡೋಗೋದು ಎರಡೂ ತಪ್ಪು ಕಾಂಗ್ರೆಸ್ ಮಾಡಲ್ಲ, ನಾನು ಯಾವಾಗಲೂ ಹಿಗ್ಗಲ್ಲ ಅವಕಾಶ ಸಿಕ್ಕಾಗ ಕೆಲಸ ಮಾಡ್ತೇವೆ ಎಂದು ಹೇಳಿದರು.
ನಾನು ಜೆಡಿಎಸ್‌ನಲ್ಲಿದ್ದಾಗಲೂ ನೂರಾರು ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೆ. ಕಾಂಗ್ರೆಸ್ ಪಕ್ಷ ಈಗ ಹೆಚ್ಚಿನ ಜವಾಬ್ದಾರಿ ಕೊಟ್ಟಿದೆ. ನಾವು ನಮ್ಮ ಪಕ್ಷ ಟೀಮ್ ವರ್ಕ್ ಮಾಡ್ತಿದ್ದೇವೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…