ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗವಾಡಿದರು.
ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡಿದೆ. ರಾಜ್ಯದ ಅಭಿವೃದ್ಧಿ ಮರಿಚಿಕೆಯಾಗಿದೆ. ಜನರು ಗ್ಯಾರಂಟಿಗಳನ್ನು ಕೇಳಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯೋದು ಕಷ್ಟ ಎಂದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಈಗ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಪರ ಕೆಲಸ ಮಾಡಬೇಕಿದೆ. ವಾರದಲ್ಲಿ ಒಂದು ದಿನ ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು ಎಂದು ಹೇಳಿದರು.
ಜಿಲ್ಲೆಯ ವಿಸಿ ನಾಲೆಗಳಿಗೆ ಕೆಆರ್‌ಎಸ್‌ನಲ್ಲಿ 80 ಅಡಿ ನೀರಿದ್ದಾಗಲೂ ನೀರು ಹರಿಸಿರುವ ಉದಾಹರಣೆ ಇದೆ. ಆದರೆ, ಇದೀಗ ನೀರಿದ್ದರೂ ನಾಲೆಗಳಿಗೆ ನೀರು ಹರಿಸಿಲ್ಲ. ಆದರೆ, ನಾವು ರೈತರ ಪರ ಇರುತ್ತೇವೆ ಎಂದರು.
ಈ ವೇಳೆ ಮುಖಂಡರಾದ ಡಿ.ಸಿ ತಮ್ಮಣ್ಣ, ಡಿ.ರಮೇಶ್, ಕಾಳೇಗೌಡ, ಬಿ.ಆರ್ ಸುರೇಶ್ ಹಾಗೂ ಸಾದೊಳಲು ಸ್ವಾಮಿ ಹಾಜರಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…