ಮಂಡ್ಯ

ಕಾಂಗ್ರೆಸ್ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸ ಮಾಡುತ್ತಿದೆ; ಆರ್‌. ಅಶೋಕ್

ಮಂಡ್ಯ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 14 ತಿಂಗಳು ಕಳೆದಿದೆ. ಜನರಿಗೆ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೂಡ ಹಗರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹರಿಹಾಯ್ದರು.

ನಗರದ ಪತ್ರಕರ್ತರ ಭವನದಲ್ಲಿಂದು(ಆ.7) ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿಗಳೆ ಮೊದಲು, ಆದರೂ ಜನರ ಮುಂದೆ ತಾವು ಸ್ವಚ್ಛ ಎಂದು ಹೇಳುತ್ತಾರೆ ಇದು ಸರಿಯಲ್ಲ. ಮೈಸೂರಿನ ಮೂಡದಲ್ಲಿ 14ದೊಡ್ಡ ನಿವೇಶನವನ್ನು ಕೊಂಡುಕೊಂಡಿದ್ದಾರೆ. ಲಿಂಗ ಹಾಗೂ ಲಿಂಗಮ್ಮ ಎಂಬುವವರ ಸ್ವಯಾರ್ಜಿತ ಆಸ್ತಿಯಾಗಿದ್ದು, 27 ಜನರಿಗೆ ಸೇರಿದ ಜಮೀನನ್ನು ಕೇವಲ ದೇವರಾಜು ಎಂಬ ಒಬ್ಬ ವ್ಯಕ್ತಿಯ ಸಹಿಯನ್ನು ಪಡೆದು ಕೊಂಡುಕೊಂಡಿದ್ದಾರೆ ಎಂದು ಮೂಡದಲ್ಲಿ ನಿವೇಶನ ಪಡೆದಿರುವ ಕುರಿತು ದಾಖಲೆ ಸಮೇತ ವಿವರಣೆ ನೀಡಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಅಶ್ವಥ್ ನಾರಾಯಣ್.ಛಲವಾದಿ ನಾರಾಯಣಸ್ವಾಮಿ. ಅರವಿಂದ್ ಬೆಲ್ಲದ್. ರಮೇಶ್ ಗೌಡ. ಶಾಸಕ ಕೆ. ಗೋಪಾಲಯ್ಯ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago