ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು, ಅಮೇರಿಕಾದಲ್ಲಿ ಭಾರತೀಯರನ್ನು ಅಕ್ರಮ ನಿರಾತ್ರಿಶರ ಹೆಸರಿನಲ್ಲಿ ಕೈಗೆ ಕೋಳ ಹಾಕಿ ಕರೆ ತರುವುದನ್ನು ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮಾತನಾಡಿ, ಅಮೇರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದಡಿ ಗಡಿ ಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಕೇಂದ್ರದ ಮೋದಿ ಸರ್ಕಾರ ಕೈ ಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರ ಹಾಕಿದರು.
ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಗಡೆ ಅವರನ್ನು ನಡೆಸಿಕೊಂಡ ರೀತಿಗೆ ಅಂದಿನ ಯುಪಿಎ ಸರ್ಕಾರ ಖಡಕ್ ಸಂದೇಶವನ್ನು ಅಮೆರಿಕಕ್ಕೆ ರವಾನಿಸಿತ್ತು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಸ್ಥಾನಮಾನಕ್ಕಿಂತ ತನ್ನ ವೈಯಕ್ತಿಕ ಪ್ರತಿಷ್ಠೆ ಹೆಚ್ಚು ಮುಖ್ಯವಾಗಿದೆ. ಮೋದಿಯವರು ಈಗಲಾದರೂ ಅನಾಗರಿಕ ನಡವಳಿಕೆ ನಿಲ್ಲಿಸಲು ಟ್ರಂಪ್ ಜೊತೆ ಮಾತಾಡಿ ಭಾರತ ದೇಶದ ವಿಮಾನ ಕಳುಹಿಸಿ ನಾಗರೀಕರನ್ನು ಗೌರವಯುತವಾಗಿ ಕರೆತರಲಿ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ, ಸಿಎಂ ದ್ಯಾವಪ್ಪ, ಸಾತನೂರು ಕೃಷ್ಣ, ಚಂದಗಾಲು ವಿಜಯಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಜಯರಾಮ್, ಚಿನಕುರಳಿ ರಮೇಶ್, ಅಂಜನಾ,ದ್ಯಾವಣ್ಣ, ಉದಯ್ ಕುಮಾರ್, ಕೆಎಂ ರಾಮಕೃಷ್ಣ,ನಾಗರಾಜು, ನವೀನ್, ಶಕುಂತಲಾ, ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…