ಮಂಡ್ಯ

ರಾಜಕೀಯ ಸ್ವಾರ್ಥಕ್ಕಾಗಿ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್: ಎಚ್‌.ಡಿ ಕುಮಾರಸ್ವಾಮಿ

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾವೇರಿ ನೀರನ್ನು ತನ್ನ ರಾಜಕೀಯ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾರಿಕೊಂಡಿದೆ. ಇಲ್ಲಿ ಮೇಕೆದಾಟು ಯೋಜನೆ ಕೈಗೊಳ್ಳುತ್ತೇವೆ ಎನ್ನುತ್ತಾರೆ, ಕಾವೇರಿಯನ್ನು ಕಾಪಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯ ವಿರೋಧಿ ಆಗಿರುವ ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿ ಕೊಂಡು ರಾಜಕೀಯ ಸ್ವಾರ್ಥಕ್ಕಾಗಿ ಸ್ಟಾಲಿನ್ ಅವರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಜಿಲ್ಲೆಯ ಮಂಡ್ಯ ವಿಶ್ವವಿದ್ಯಾಲಯದ ಎದುರಿನಿಂದ ರಾಜ್ಯ ಯುವ ಜಾ.ದಳ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಜಾದಳ ಮುಖಂಡರಾದ ಬಿ.ಆರ್. ರಾಮಚಂದ್ರು, ಅಮರಾವತಿ ಚಂದ್ರಶೇಖರ್, ಸುರೇಶ್, ಬಿಜೆಪಿ ಮುಖಂಡರಾದ ಅಶೋಕ್ ಜಯರಾಮ್, ಚಂದಗಾಲು ಶಿವಣ್ಣ, ಸಿ.ಟಿ.ಮಂಜುನಾಥ್ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

ಕೆಆರ್ ಎಸ್ ನಲ್ಲಿ 92 ಅಡಿ ನೀರಿದ್ದರೂ ಭತ್ತ ನಾಟಿ ಮಾಡಬೇಡಿ ಎಂದು ಸರ್ಕಾರ ಫರ್ಮಾನು ಹೊರಡಿಸಿತು. ಇಂದು 86 ಅಡಿ ನೀರಿದ್ದರೂ ನಾಲೆಗಳಿಗೆ ನೀರು ಹರಿಸದೆ ಮಂಡ್ಯ ಜಿಲ್ಲಾ ರೈತರು ಪರಿತಪಿಸುವಂತೆ ಮಾಡಿದೆ. ಮಂಡ್ಯ ನೆಲಕ್ಕೆ ಪ್ರವೇಶ ಮಾಡುವಾಗ ‘ಸಕ್ಕರೆ ನಾಡಿಗೆ ಸ್ವಾಗತ’ ಎಂದು ನಾಮಫಲಕ ಇರುತ್ತದೆ. ಆದರೆ, ಈ ಸರ್ಕಾರ ಮಂಡ್ಯವನ್ನು ಬರಡು ಜಿಲ್ಲೆ ಮಾಡಿದೆ. ಈ ಸರ್ಕಾರ ಬಂದ ಮೇಲೆ ಎಲ್ಲ ಕಡೆ ಕಬ್ಬು ಒಣಗಿದೆ. ಇನ್ನು ಅದಕ್ಕೆ ಬೆಂಕಿ ಹಾಕೋದು ಮಾತ್ರ ಬಾಕಿ ಇದೆ. ಕೋಟ್ಯಂತರ ರೂ. ನಾಶವಾಗಿದೆ. ಆದರೆ, ಕಾಂಗ್ರೆಸ್ 2 ಸಾವಿರ ಪರಿಹಾರ ಕೊಟ್ಟರೆ ಉಪಯೋಗ ಏನು ಎಂದು ಪ್ರಶ್ನಿಸಿದರು.

ಇನ್ನು ದೇವೇಗೌಡರು ಈ ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಕೆಲವರು ಕೇಳಿದ್ದಾರೆ. ಅವರು ಕೊಟ್ಟಿರುವ ಕೊಡುಗೆ ಏನು ಎನ್ನುವುದು ಜನರಿಗೆ ಗೊತ್ತಿದೆ. ಗೊತ್ತಿಲ್ಲ ಎಂದರೆ ತಿಳಿದುಕೊಳ್ಳಿ, ಮೇಕೆದಾಟು, ಕಾವೇರಿ ನೀರಿನ ವಿಷಯದಲ್ಲಿ ರಾಜ್ಯಸಭೆಯಲ್ಲಿ ದೇವೇಗೌಡರು ಪರಿಪರಿಯಾಗಿ ಬೇಡಿಕೊಂಡರೂ ಸದನದಲ್ಲಿಯೇ ಕೂತಿದ್ದ ಮಲ್ಲಿಕಾರ್ಜುನಖರ್ಗೆ, ಇತರೆ ಕಾಂಗ್ರೆಸ್ ಸದಸ್ಯರು ಮೌನವಾಗಿ ಕೂತಿದ್ದರು. ಅವರು ಒಂದು ಮಾತನ್ನೂ ಆಡಲಿಲ್ಲ ಯಾಕೆ? ಎಂದು ಖಾರವಾಗಿ ಪ್ರಶ್ನಿಸಿದರು.

ಮೊದಲು ಸ್ಟಾಲಿನ್ ಮನವೊಲಿಸಿ, ಅಥವಾ ಡಿಎಂಕೆ ಬೆದರಿಕೆಗೆ ಸೊಪ್ಪು ಹಾಕಲ್ಲ, ನಮಗೆ ಮೇಕೆದಾಟು ಯೋಜನೆ ಬೇಕು ಎಂದು ಹೇಳಿ, ಮೇಕೆದಾಟು ಯೋಜನೆಗೆ ನಾವು ಐದು ನಿಮಿಷಗಳಲ್ಲಿ ಅನುಮತಿ ಕೊಡಿಸುತ್ತೇವೆ. ನಿಮ್ಮ ಮಿತ್ರಪಕ್ಷ ಡಿಎಂಕೆ ಸರ್ಕಾರದ ಮನವೊಲಿಸಿ ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಗಳನ್ನು ಹಿಂಪಡೆ ಯುವಂತೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago