ಮಂಡ್ಯ

ಕಾಂಗ್ರೆಸ್‌ನಿಂದ ನಿರಂತರ ಜನಪರ ಬಜೆಟ್‌ : ಸಿ.ಡಿ ಗಂಗಾಧರ್‌

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಿಂಹ ಪಾಲು ನೀಡಿರುವುದಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್, ಶಾಸಕರು, ಸಚಿವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಾಗು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕೆಕ ೫೩,೧೧೭ ಕೋಟಿ ರೂ ಅನುದಾನ ಮೀಸಲಿಟ್ಟು, ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಿಗೆ ಅತ್ಯಂತ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಮೂಲಭೂತ ಸೌಕರ್ಯಕ್ಕೆ ೨೫ ಕೋಟಿ ನೀಡಿ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೃಷಿ ವಿವಿಯಲ್ಲಿ ತರಗತಿ ಪ್ರಾರಂಭಕ್ಕೆ ಹಸಿರು ನಿಶಾನೆ ತೋರಿದ್ದು, ಇದಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೊಂಕು ತೋರಿ, ಮಂಡ್ಯ ಅವರಿಗೆ ಮತದಾನಕ್ಕೆ ಮಾತ್ರ ಅಭಿವೃದ್ಧಿಗೆ ಬೇಕಿಲ್ಲ ಎಂಬುದನ್ನು ತೋರಿದ್ದಾರೆ ಎಂದು ಖಂಡಿಸಿದರು.

ಅನಾರೋಗ್ಯ ಸಂಬಂಧ ವೀಲ್‌ಚೇರ್‌ನಲ್ಲಿ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣಸ್ವಾಮಿ ತಮ್ಮ ಹುದ್ದೆಯ ಜವಾಬ್ದಾರಿ ಅರಿಯದೆ ಮನ ಬಂದಂತೆ ಮಾತನಾಡಿದ್ದು, ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ತಕ್ಷಣವೇ ಅಂಬೇಡ್ಕರ್ ಮತ್ತು ಭಗತ್‌ಸಿಂಗ್ ಫೋಟೊ ತೆಗೆದಿರುವುದಕ್ಕೆ ಉತ್ತರ ನೀಡಲಿ ಎಂದು ತಾಕೀತು ಮಾಡಿದರು.

ಮಾಜಿ ಸಚಿವ, ಮಾಜಿ ಲೋಕಸಭಾ ಸದಸ್ಯ ಸಿ.ಎಸ್.ಪುಟ್ಟರಾಜು ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ಸಕಾಲಕ್ಕೆ ಹಾಕಿ ಎಂದು ಪ್ರತಿಭಟನೆ ಮಾಡಿರುವು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ಪಕ್ಷದ ಏಳಿಗೆ ಸಹಿಸದೇ ಅನಾವಶ್ಯಕವಾಗಿ ತಾವು ಮತಿಭ್ರಮಣೆಗೊಂಡು, ಜನರಲ್ಲಿ ಗೊಂದಲ ಮೂಡಿಸಿ, ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದಲಿತ ಸಮುದಾಯದ ಎಡಗೈ- ಬಲಗೈ ಜಾತಿಗಳಿಗೆ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿಗಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಆಯೋಗ ರಚಿಸಿದ್ದು, ಇದನ್ನು ಸರಿಯಾಗಿ ತಿಳಿಯದೆ ಡಾ.ಹೆಚ್.ಸಿ.ಮಹದೇವಪ್ಪ ರಾಜೀನಾಮೆ ಕೇಳುವುದು ಸರಿಯಲ್ಲ. ಅಂಬೇಡ್ಕರ್‌ರ ಆಶಯದಂತೆ ದಲಿತರಿಗೆ ಕಾಂಗ್ರೆಸ್ ಪಕ್ಷ ನ್ಯಾಯ ನೀಡಿದೆ ಎಂದು ಸಮರ್ಥಿಸಿಕೊಂಡರು.

ಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಎನ್.ಆರ್.ಚಂದ್ರಶೇಖರ್, ಎಸ್ಸಿ/ಎಸ್ಟಿ ಉಪಾಧ್ಯಕ್ಷ ವಿಜಿಕುಮಾರ್ ಚಂದಗಾಲು, ಸುಂಡಹಳ್ಳಿ ಮಂಜುನಾಥ್, ವಿಜಯಲಕ್ಷ್ಮಿ ರಘುನಂದನ್, ಅಪ್ಪಾಜಿ, ಸಾತನೂರು ಕೃಷ್ಣ, ಬೋರೇಗೌಡ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

5 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

5 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

5 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

7 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

7 hours ago