ಮಂಡ್ಯ

ಮಂಡ್ಯ | ಮಹಾನಗರ ಪಾಲಿಕೆಯಾಗಿ ಪರಿವರ್ತನೆಗೆ ಚಿಂತನೆ ; ಶಾಸಗನ ಗಣಿಗ ರವಿಕುಮಾರ್‌

ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿ ವಿಸ್ತರಣೆ ಬಗ್ಗೆ ಹಿಂದಿನಿಂದಲೂ ಚರ್ಚೆಗಳು ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚೆಸಿರುವುದು ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಽಕಾರಿಗಳೊಂದಿಗೆ ಸಮಾಲೋಚಿಸಲಾಗುವುದು ಎಂದು ಹೇಳಿದರು.

ಮಂಡ್ಯ ನಗರಸಭೆಯ ವ್ಯಾಪ್ತಿ ದೊಡ್ಡದಾದರೆ ಅಥವಾ ನಗರಸಭೆಯು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆಗೇರಿದರೆ ಅಭಿವೃದ್ಧಿ ದೃಷ್ಟಿಯಿಂದಲೂ ಅನುಕೂಲವಾಗಲಿದೆ. ಈ ವಿಚಾರವಾಗಿ ಈಗಾಗಲೇ ಹೊಸ ಬಡಾವಣೆಗಳ ನಿವಾಸಿಗಳಿಂದ ಮನವಿಗಳೂ ಬಂದಿವೆ. ಹೀಗಾಗಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಸೂಕ್ತ ತೀರ್ಮಾನದೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

3 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

5 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago