ಮಂಡ್ಯ

ಕೆಆರ್‌ಎಸ್‌ ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆಗೆ ಚಿಂತನೆ

ಹೊಸದಿಲ್ಲಿ : ವಾಟರ್‌ ಸ್ಪೋರ್ಟ್ಸ್‌, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್‌ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ವಿಮಾನಯಾನ ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ ಎಂದಿದ್ದಾರೆ.

ವಾಟರ್‌ ಸ್ಪೋರ್ಟ್‌, ಜಲವಿಮಾನಯಾನ ಕ್ರೀಡಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.

ಜೊತೆಗೆ ಕರ್ನಾಟಕಕ್ಕೆ ಸಂಬಂಧಿಸಿದ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ಸೇರಿದಂತೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago