ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರತಿ ಮನೆಗೆ ವೈರಸ್ ಟ್ಯಾಬ್ಲೆಟ್ ನೀಡಿ ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳ ತಂಡ ನಿಯೋಜನೆ ಮಾಡಿದ್ದೇವೆ ಜೊತೆಗೆ ಒಂದು ಆಂಬ್ಯುಲೆನ್ಸ್ ಗ್ರಾಮದಲ್ಲಿ ಇರಿಸಿದ್ದೇವೆ ಎಂದು ಹೇಳಿದರು.
ಬಳಿಕ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು