ಮಂಡ್ಯ

ಕಲುಷಿತ ನೀರು ಸೇವನೆ ಪ್ರಕರಣ: ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರತಿ ಮನೆಗೆ ವೈರಸ್‌ ಟ್ಯಾಬ್ಲೆಟ್‌ ನೀಡಿ ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳ ತಂಡ ನಿಯೋಜನೆ ಮಾಡಿದ್ದೇವೆ ಜೊತೆಗೆ ಒಂದು ಆಂಬ್ಯುಲೆನ್ಸ್‌ ಗ್ರಾಮದಲ್ಲಿ ಇರಿಸಿದ್ದೇವೆ ಎಂದು ಹೇಳಿದರು.

ಬಳಿಕ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

60 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

1 hour ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

2 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago