ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ.
ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತರು ಈಗ ಕಂಗಾಲಾಗಿದ್ದಾರೆ. ಪ್ರವಾಹದ ನೀರು ಕೃಷಿ ಭೂಮಿಗಳಲ್ಲಿ ನಿಂತಿದ್ದು, ಬೆಳೆಗಳು ಕೊಳೆತು ಹೋಗುತ್ತಿವೆ.
ಕೃಷಿ ಭೂಮಿಯಲ್ಲಿ ಬೆಳೆದಿದ್ದ ಕನಕಾಂಬರ ಹೂವು ಸಂಪೂರ್ಣ ನಾಶವಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ.
ಕೆಆರ್‌ಎಸ್ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಿದರೆ ನದಿ ತೀರದಲ್ಲಿರುವ 220 ಹೆಕ್ಟೇರ್ ಕೃಷಿ ಭೂಮಿ ಜಲಾವೃತವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಈಗ ಜಲಾಶಯದಿಂದ ಒಂದು ಲಕ್ಷದ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಈಗ ಬೆಳೆ ನಾಶದಿಂದ ರೈತರು ತೀವ್ರ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…