FIR filed Hindu leader
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ ಮಂಡ್ಯದ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣಗೆ ಮದುವೆ ನಿಶ್ಚಯವಾಗಿತ್ತು. ಈ ವೇಳೆ ಸಂತ್ರಸ್ತೆಯು ಬಾಲಕೃಷ್ಣ ಜೊತೆಯಲ್ಲಿ ಹಲವಾರು ಫೋಟೋಗಳನ್ನು ತೆಗೆಸಿಕೊಂಡಿದ್ದಳು. ಆದರೆ ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ಗೊತ್ತಾಯಿತು. ಈ ವೇಳೆ ಸಂತ್ರಸ್ತೆ ನಾನು ಆತನ ಜೊತೆ ಮದುವೆ ಆಗಲ್ಲ ಎಂದು ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೆರಳಿದ್ದ ಬಾಲಕೃಷ್ಣ ಅಂದಿನಿಂದಲೇ ಯುವತಿಗೆ ಕಿರುಕುಳ ನೀಡುತ್ತಾ ಬಂದಿದ್ದ.
ಯುವತಿ ಜೊತೆ ಇದ್ದ ಹಳೆಯ ಫೋಟೋಗಳನ್ನು ತೋರಿಸಿ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡುತ್ತಾ ಬಂದಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಬಾಲಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…