ಮಂಡ್ಯ

ಶೀಘ್ರ ನ್ಯಾಯದಾಯಕ್ಕೆ ವಕೀಲರ ಸಹಕಾರ ಮುಖ್ಯ: ನ್ಯಾ.ಮಹೇಶ್‌

ಮಂಡ್ಯ/ಕೆ.ಆರ್‌ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು.

ಅವರು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸುಧೀರ್ ಮತ್ತು ಅಪರ ಸಿವಿಲ್ ನ್ಯಾಯಾಧೀಶ ದೇವರಾಜ್ ಅವರನ್ನು ಸ್ವಾಗತಿಸಿ ನೂತನ ನ್ಯಾಯಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷ್ಣರಾಜಪೇಟೆ ನ್ಯಾಯಾಲಯದಲ್ಲಿ 4500ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ, ಈ ದಿಕ್ಕಿನಲ್ಲಿ ಶೀಘ್ರವಾಗಿ ಕಕ್ಷೀದಾರರಿಗೆ ನ್ಯಾಯವನ್ನು ಒದಗಿಸಿಕೊಡುವ ದಿಕ್ಕಿನಲ್ಲಿ ವಕೀಲರು ಬದ್ಧತೆಯಿಂದ ವಾದ ಮಂಡಿಸಿ ಶೀಘ್ರ ನ್ಯಾಯದಾನಕ್ಕೆ ನ್ಯಾಯಧೀಶರಿಗೆ ಪೂರಕ ಸಹಕಾರವನ್ನು ನೀಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಉಚ್ಚ ನ್ಯಾಯಾಲಯವು ಅತಿ ಶೀಘ್ರದಲ್ಲಿಯೇ ಕೆ.ಆರ್.ಪೇಟೆ ಪಟ್ಟಣದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯವನ್ನು ಆರಂಭ ಮಾಡುವ ಸಾಧ್ಯತೆ ಇದೆ. ನೀವು ಶ್ರೀರಂಗಪಟ್ಟಣದ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಕ್ರಿಮಿನಲ್ ಕೇಸುಗಳಿಗಾಗಿ ಅಲೆದಾಡುವ ಅಗತ್ಯವು ಸದ್ಯದಲ್ಲೇ ನಿಲ್ಲಲಿದೆ. ಆದ್ದರಿಂದ ವಕೀಲರು ನ್ಯಾಯವನ್ನು ಅರಸಿ ನ್ಯಾಯಾಲಯಕ್ಕೆ ಬರುವ ಬಡ ಕಕ್ಷಿದಾರರಿಗೆ ಶೀಘ್ರವೇ ನ್ಯಾಯ ದೊರಕುವ ದಿಕ್ಕಿನಲ್ಲಿ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರಾದ ಮಹೇಶ್ ಕಿವಿಮಾತು ಹೇಳಿದರು.

ಕೆ.ಆರ್.ಪೇಟೆ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಾದ ಸುಧೀರ್ ಮತ್ತು ದೇವರಾಜು ಮಾತನಾಡಿ ಈವರೆಗೆ ನ್ಯಾಯಾಧೀಶರಾಗಿ ಕೆಲಸ ಮಾಡಿರುವ ನ್ಯಾಯಾಧೀಶರುಗಳಿಗೆ ನೀಡಿರುವಂತೆ ತಮಗೂ ಕೆಲಸ ಮಾಡಲು ವಕೀಲರ ಸಂಘ ಹಾಗೂ ವಕೀಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ, ಕೆ.ಆರ್.ಪೇಟೆ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿರುವ ವಕೀಲರೆಲ್ಲರೂ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬದಿಂದ ಬಂದಿರುವ ಯುವಕರಾಗಿದ್ದಾರೆ, ವಾದ ಮಂಡನೆ ಹಾಗೂ ಪ್ರಕರಣಗಳ ಇತ್ಯರ್ಥದ ಸಂದರ್ಭದಲ್ಲಿ ವಕೀಲರುಗಳಿಂದ ಸಣ್ಣಪುಟ್ಟ ಲೋಪ ದೋಷಗಳಾದರೆ, ಅವರನ್ನು ತಿದ್ದಿ ತೀಡಿ ಪೂರಕವಾದ ಸಹಕಾರ ನೀಡಿ ಕೆಲಸ ಮಾಡಲು ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದರು.

ಅಪರ ಸಿವಿಲ್ ನ್ಯಾಯಾಧಿಶರಾದ ಶಕುಂತಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಕೀಲರು ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಕಾನೂನು ಬದ್ಧವಾಗಿ ಕೆಲಸ ಮಾಡಿ ನ್ಯಾಯ ಬದ್ಧವಾಗಿ ತೀರ್ಪು ನೀಡಲು ವಕೀಲರ ಸಂಘವು ಮುಂದಾಗಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರುಗಳಿಗೆ ತಮ್ಮನ್ನು ಪರಸ್ಪರ ಪರಿಚಯ ಮಾಡಿಕೊಂಡರು.

ಸರ್ಕಾರಿ ಅಭಿಯೋಜಕ ಸುರೇಂದ್ರ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್, ಜಿ.ಆರ್. ಅನಂತರಾಮಯ್ಯ, ವಕೀಲರ ಸಂಘದ ಕಾರ್ಯದರ್ಶಿ ರಾಜೇಗೌಡ ಸಭೆಯಲ್ಲಿ ಮಾತನಾಡಿದರು. ವಕೀಲರ ಸಂಘದ ಪದಾಧಿಕಾರಿಗಳಾದ ದಿನೇಶ್, ಡಿ.ಆರ್.ಜಗಧೀಶ್, ನಿರಂಜನ, ಸುಜಾತ, ಹಿರಿಯ ವಕೀಲರರಾದ ಎಂ. ಆರ್.ಪ್ರಸನ್ನಕುಮಾರ್, ಕೆ. ಎನ್.ನಾಗರಾಜು, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಬಂಡಿಹೊಳೆ ಗಣೇಶ್, ಗಂಜಿಗೆರೆ ಲೋಕೇಶ್, ಎಂ.ಎಲ್. ಸುರೇಶ್, ಸಿ.ಎನ್.ಮೋಹನ್, ಕೆ.ಆರ್.ಮಹೇಶ್, ನಯಾಜ್ ಪಾಷ, ಮಂಜುನಾಥ್ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago