ಮಂಡ್ಯ

ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದರಿ ಯೋಜನೆ ಜಾರಿಯಾಗುವ ಮುನ್ನವೇ ಜಿಲ್ಲೆಯ ಶೇ95 ರಷ್ಟು ಕುಟುಂಬಗಳಿಗೆ ನಳ ಸಂಪರ್ಕವಿದ್ದರೂ ಶೇ.53ರಷ್ಟು ಮಾತ್ರ ಸಳ ಸಂಪರ್ಕವಿದೆಯೆಂದು ಸುಳ್ಳು ಮಾಹಿತಿ ನೀಡಿ ಸುಮಾರು 1100 ರಿಂದ 1200 ಕೋಟಿ ರೂ ವರೆಗೆ ಹಣ ಮಂಜೂರು ಮಾಡಿಸಿ ಲೂಟಿ ಮಾಡುವ ದಂಧೆ ಮಾಡಲಾಗುತ್ತಿದೆ ಎಂದು ದೂರಿದರು.

ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮನಸೋ ಇಚ್ಛೆ ಅಂದಾಜು ಪಟ್ಟಿ ತಯಾರಿಸಿ 46 ಪಂಚಾಯಿತಿಗಳ ಪೈಕಿ ಇರುವ 175 ಜನವಸತಿ ಪ್ರದೇಶಗಳಿಗೆ 287 ಕಾಮಗಾರಿಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ ಯಾವುದೇ ರೀತಿ ಜಿಎಸ್‌ಟಿ ಕಡಿತ ಮಾಡಲಾಗದೆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗಿದೆ ಎಂದು ದೂರಿದರು.

ನಳ ಸಂಪರ್ಕ ಇಲ್ಲದ ಮಾಹಿತಿ ಯಾವ ಅಧಿಕಾರಿಗಳ ಬಳಿಯೂ ಇಲ್ಲವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಅಂದಾಜು ಪಟ್ಟಿ ಮಾಡಿರುವುದಿಲ್ಲ, ಮೂರನೇ ವ್ಯಕ್ತಿ ತಪಾಸಣೆ ಸಂಸ್ಥೆಯು ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡದೇ ಏಕಾಏಕಿ ವರದಿ ನೀಡಿದ್ದು, ಸದರಿ ಸಮೀಕ್ಷೆಗೆ 20 ಕೋಟಿ ರೂ.ಗಿಂತಲು ಹೆಚ್ಚು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಹೇಳಿದರು.

ಗುತ್ತಿಗೆದಾರರು ಕಾಮಗಾರಿ ಮಾಡದೇ ಅರ್ಹತೆ ಇಲ್ಲದವರಿಗೆ ಮತ್ತು ರಾಜಕಾರಣಿಗಳ ಹಿಂಬಾಲಕರಿಗೆ ಅಲ್ಲದೇ ಸ್ವತಃ ಇಂಜಿನಿಯರ್‌ಗಳೇ ಉಪಗುತ್ತಿಗೆ ಪಡೆದು ಕೆಲಸ ಮಾಡಿಸುವ ಮೂಲಕ ಕಳಪೆ ಕಾಮಗಾರಿ, ಕಮಿಷನ್ ದಂಧೆ ನಡೆಯಲು ಕಾರಣವಾಗಿದ್ದು, ಸಮರ್ಪಕವಾಗಿ ಯೋಜನೆಯ ಅನುಷ್ಠಾನ ಮಾಡಲಾಗುತ್ತಿಲ್ಲವೆಂದು ಗಂಭೀರ ಆರೋಪ ಮಾಡಿದರು.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ದೂರಿದ ಹಿನ್ನಲೆ, ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ತನಿಖಾ ತಂಡ ರಚಿಸಲು ಮನವಿ ಮಾಡಿದ್ದಾರೆ, ಒಂದು ವೇಳೆ ತನಿಖಾ ತಂಡ ರಚಿಸಿ, ಕ್ರಮ ವಹಿಸದೇ ಇದ್ದರೆ, ಲೋಕಾಯುಕ್ತ ಹಾಗೂ ಸಿಬಿಐಗೆ ದಾಖಲೆ ಸಮೇತ ದೂರು ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜಣ್ಣ, ಸಿವರಾಮ್, ಆನಂದ್ ಕೊಮ್ಮೇರಹಳ್ಳಿ ಇದ್ದರು.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

19 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

19 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

19 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 hours ago