ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ ಭಾರೀ ಭದ್ರತೆಯೊಂದಿಗೆ ವೈರಮುಡಿ ಆಭರಣವನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು.
ಜಿಲ್ಲಾ ಖಜಾನೆಯಿಂದ ವೈರಮುಡಿಯನ್ನು ಹೊರೆ ತೆಗೆಯುವ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಹಾಜರಿದ್ದರು.
ಖಜಾನೆಯಿಂದ ಜಿಲ್ಲಾಧಿಕಾರಿ ಕುಮಾರ್ ಮತ್ತು ಪೊಲೀಸ್ ಅಧಿಕಾರಿ ಶೋಭಾರಾಣಿ, ತಲೆಯ ಮೇಲೆ, ವೈರಮುಡಿ ಆಭರಣಗಳ ಗಂಟನ್ನು ಹೊತ್ತು ತಂದು ಖಜಾನೆಯ ದ್ವಾರದಲ್ಲಿ ಇರಿಸಿದರು. ತೆಲೆಯ ಮೇಲೆ ವೈರಮುಡಿಯನ್ನು ಹೊತ್ತು ತರುವ ವೇಳೆ, ಕಿಕ್ಕಿರಿದು ಜನ ಸೇರಿದ್ದರು. ವೈರಮುಡಿಗೆ ಪೂಜೆಯನ್ನು ಸಲ್ಲಿಸಿದ ನಂತರ, ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದೇವಾಲಯಕ್ಕೆ ಕೊಂಡೊಯ್ಯವ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ, ಜಿಲ್ಲಾ ಪಂಚಾಯತಿ ಸಿಇಒ ಕೆಆರ್ ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿಸಿ ಶಿವಾನಂದ ಮೂರ್ತಿ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.
ಜಿಲ್ಲಾ ಖಜಾನೆಯಿಂದ ಹೊರಡುವ ವೈರಮುಡಿ ಹೊತ್ತ ಮೆರವಣಿಗೆಗೆ ಮೊದಲು, ನಗರದ ಲಕ್ಷ್ಮೀ ಜನಾರ್ಧನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು. ಅಲ್ಲಿಂದ, ವಿವಿಧ ಗ್ರಾಮಗಳಲ್ಲಿ ಪೂಜೆ ನಡೆದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಮೇಲುಕೋಟೆಗೆ ತಲುಪಲಿದೆ. ಅಲ್ಲಿ ಮತ್ತೊಮ್ಮೆ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ, ಆಭರಣಗಳ ಮರು ಪರಿಶೀಲನೆ ನಡೆಸಿ, ನಂತರ ದೇವರಿಗೆ ತೊಡಿಸಲಾಗುವುದು.
ಇಂದು (ಮಾರ್ಚ್ 28) ರಾತ್ರಿ ಎಂಟು ಗಂಟೆಗೆ, ಸ್ವಾಮಿಗೆ ಕಿರೀಟಧಾರಣೆ ಮಾಡಿ, ವೈಭವದಿಂದ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ದೇವಿಭೂದೇವಿ ಸಮೇತ ಗರುಡಾರೂಢನಾದ ಶ್ರೀ ಚೆಲುವನಾರಾಯಣ ಸ್ವಾಮಿಯ ಉತ್ಸವ ಮೂರ್ತಿಗೆ ಅಪೂರ್ವ ನಾಗಮಣಿ ಇರುವ ವೈರಮುಡಿ ಕಿರೀಟಧಾರಣೆ ಮಾಡಿ ಉತ್ಸವ ನಡೆಸಲಾಗುತ್ತದೆ. ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾ.23ರಿಂದಲೇ ಚಾಲನೆ ದೊರೆತಿದೆ ಮತ್ತು ಏಪ್ರಿಲ್ 4ರಂದು ಮುಕ್ತಾಯವಾಗಲಿದೆ.
ಮಾ.28ರಂದು ರಾತ್ರಿ 8.30ಕ್ಕೆ ಗರುಡ ಪ್ರದಕ್ಷಿಣೆ, ಮಹಾಮಂಗಳಾರತಿ ಬಳಿಕ ವೈರಮುಡಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ನಸುಕಿನ ಜಾವ 3.30ರವರೆಗೆ ಉತ್ಸವ ನಡೆದು, ವಾಹನೊತ್ಸವ ಮಂಟಪದಲ್ಲಿ ಮುಕ್ತಾಯಗೊಳ್ಳಲಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…