ಮಂಡ್ಯ

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದರ್ಶನ್‌ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ ಶರಣಾಗಿದ್ದಾರೆ.

ಕೆ.ಆರ್.‌ಪೇಟೆ ಟೌನ್‌ನ ಜಯನಗರದ ಸ್ವಗೃಹದಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಪ್ರಕಾರ ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಅದೃಷ್ಟವಶಾತ್‌ ಮಗು ಬದುಕುಳಿದಿದೆ.

ಇನ್ನು ಮೃತ ದರ್ಶನ್‌ ಹಾಗೂ ದಿವ್ಯಶ್ರೀ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಆರ್.ಪೇಟೆ ಟೌನ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದಂಪತಿಗಳ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

47 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

1 hour ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago