ಮಂಡ್ಯ

ಶಿಂಷ ನದಿ ಪಾತ್ರದ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ : ತಹಸೀಲ್ದಾರ್‌ ಪರಶುರಾಮ್‌

ಮದ್ದೂರು : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಿಂಷಾ ನದಿಪಾತ್ರದಲ್ಲಿ ದಿನನಿತ್ಯ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವುದಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಧಿಕಾರಿಗಳೇ ಮರಳೂ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಸನ್ ಜಾರಿಯಲ್ಲಿದ್ದರೂ ಕೆಲವರು ನಿರಂತರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ಯಾವುದೇ ಮುಲಾಜಿಗೆ ಒಳಗಾಗದೆ ಪ್ರಕರಣ ದಾಖಲು ಮಾಡಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳುಗಾರಿಕೆ ತಡೆಯುವ ಸಂಬಂಧ ಈಗಾಗಲೇ ಕಾರ್ಯತಂತ್ರ ರೂಪಿಸಿದ್ದು, ಮರಳು ಅಡ್ಡೆಯ ಮೇಲೆ ದೀಢೀರ್ ದಾಳಿ ಮಾಡಿ ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರು, ರೈತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಿಗರ ಕಚೇರಿಯನ್ನು ತೆರೆಯಲು ಕ್ರಮ ವಹಿಸಿರುವುದಾಗಿ ತಿಳಿಸಿದರು.
ಸರ್ಕಾರ ದ ಯೋಜನೆಗಳು ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕೆಂಬ ಉದ್ದೇಶ ಹೊಂದಿರುವ ಸರ್ಕಾರ ಹಲವು ಯೋಜನೆಗಳನ್ನು ಜಾರಿಗಳಿಸುವ ಜತೆಗೆ ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಇ-ಪೌತಿಖಾತೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಗ್ರಾಮ ಲೆಕ್ಕಿಗರು, ಕಂದಾಯ ರಾಜಸ್ವ ನಿರೀಕ್ಷಕರು ಪರಿಶೀಲನೆ ನಡೆಸಿ ಬಳಿಕ ತಹಸೋಲ್ದಾರ್ ರವರ ಅದೇಶದಂತೆ 15 ದಿನಗಳಲ್ಲಿ ಖಾತೆ ಮಾಡಿಕೊಡಲಿರುವುದಾಗಿ ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸಕಾಲದಲ್ಲಿ ರೈತರಿಗೆ ದೊರಕಬೇಕೆಂಬ ಉದ್ದೇಶದೊಂದಿಗೆ ರೆಕಾರ್ಡ್ ಗಳ ನ್ನು ಡಿಜಿಟಲೀಕರಣ ಕೈಗೊಂಡು ಶೇ. 75ರಷ್ಟು ಪ್ರಗತಿ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳಲಿದ್ದು ರೈತರು, ಸಾರ್ವಜನಿಕರು ತಾಲೂಕು ಕಚೇರಿಗೆ ಆಗಮಿಸಿದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲೇ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯಬಹುದೆಂದರು.

ಕರ್ತವ್ಯನಿರತ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ತೆರಳಿ ರೈತರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಮಾಹಿತಿಗಳನ್ನು ಸ್ಥಳದಲ್ಲೇ ಒದಗಿಸಬೇಕೆಂದು ಈಗಾಗಲೇ ಸೂಚನೆ ನೀಡಿದ್ದು ಇದರಿಂದಾಗಿ ದೂರದ ಗ್ರಾಮಗಳಿಂದ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಿದಂತಾಗುತ್ತದೆಂದರು.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

20 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

20 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

20 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 hours ago