ಮಂಡ್ಯ

ಸಂಸದೆ ಮತ್ತು ಶಾಸಕ ಇಬ್ಬರ ನಡುವೆ ಕ್ರೆಡಿಟ್​ ವಾರ್..!

. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ನಾನು ಮನವಿ ಮಾಡಿಕೊಂಡಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಬಾಲಕಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ ಎಂದು ಶಾಸಕ ಅನ್ನದಾನಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಸುಮಲತಾ ಅಂಬರೀಶ್ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಬಾಲಕಿ ಮೃತಪಟ್ಟ ದಿನದಿಂದಲೂ ಸುಮ್ಮನಿದ್ದ ಅನ್ನದಾನಿ ಈಗ ಕ್ರೆಡಿಟ್ ಪಡೆಯಲು ಮುಂದಾಗಿದ್ದಾರೆ. ಸುಮಲತಾ ಅಂಬರೀಶ್ ಅವರು ಸಿಎಂ ಬಳಿ ಮಾತನಾಡಿದ ಬಳಿಕ ಹತ್ತು ಲಕ್ಷ ಹಣ ನೀಡಲಾಗಿದೆ. ಶಾಸಕ ಅನ್ನದಾನಿ ಇದರ ಕ್ರೆಡಿಟ್ ಪಡೆಯಲು ಹೋಗಿ ಜನಗಳ ಮುಂದೆ ಮುಖಭಂಗ ಅನುಭವಿಸಿದ್ದಾರೆ ಎಂದು ಸಂಸದರ ಬೆಂಬಲಿಗ ಬೇಲೂರು ಸೋಮಶೇಖರ್ ಆಕ್ರೋಶ ಹೊರ ಹಾಕಿದ್ದಾರೆ.‌

ಬಾಲಕಿ ಮೃತಪಟ್ಟ ದಿನದಂದು 25 ಲಕ್ಷ ನೆರವು ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾಗಿ ಅನ್ನದಾನಿ ಹೇಳಿದ್ದಾರೆ. ಇತ್ತ ಸುಮಲತಾ ಅಂಬರೀಶ್, ಸಿಎಂ ಬಳಿ ನಾನು ಮನವಿ ಮಾಡಿದ್ದರಿಂದ ತಕ್ಷಣ ನೆರವು ಘೋಷಣೆ ಮಾಡಿದರು ಎಂದು ಹೇಳುತ್ತಿದ್ದಾರೆ. ಹಾಗಾಗಿ ಇಬ್ಬರ ನಡುವೆ ಕ್ರೆಡಿಟ್ ವಾರ್‌ ಶುರುವಾಗಿದೆ.

 

andolana

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

11 mins ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

13 mins ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

15 mins ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

18 mins ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

34 mins ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

40 mins ago