Mysore
16
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂದ ಜನಸಾಗರ

ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ.

ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅದ್ದೂರಿಯಾಗಿ ಚಾಲನೆ ನೀಡಿದ್ದು, ಸಾಹಿತ್ಯ ಸಮ್ಮೇಳನವನ್ನು ಕಣ್ತುಂಬಿಕೊಳ್ಳಲು ಸುಮಾರು ಬೆಳಿಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಆಗಮಿಸಿದ್ದಾರೆ.

ಈ ಸಾಹಿತ್ಯ ಸಮ್ಮೇಳನಕ್ಕೆ ಅಪಾರ ಜನರ ನೀರಿಕ್ಷೆಯ ಆಧಾರದ ಮೇಲೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಏರ್ಪಡಿಸಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದ ಹಾಗೂ ಮಂಡ್ಯ ನಗರಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಿರುವುದರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನಸಾಗರ ಹರಿದು ಬಂದಿದೆ. ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮತ್ತು ನಗರದ ಬಹುತೇಕ ವಿದ್ಯಾರ್ಥಿಗಳು, ಉಪನ್ಯಾಕರು ಹಾಗೂ ಶಿಕ್ಷಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಇನ್ನು ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಸಮ್ಮೇಳನದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂಬ ಕಾರಣಕ್ಕೆ ಮುನ್ನಚ್ಚೆರಿಕೆ ಕ್ರಮವಾಗಿ ಜಿಲ್ಲಾ ಪೊಲೀಸದ್‌ ಇಲಾಖೆ ಭಾರೀ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಸುಮಾರು 3,200 ಪೊಲೀಸ್‌ ಸಿಬ್ಬಂದಿಯನ್ನು ಈ ಸಾಹಿತ್ಯ ಸಮ್ಮೇಳನಕ್ಕಾಗಿ ನಿಯೋಜಿಸಲಾಗಿದೆ.

 

 

Tags:
error: Content is protected !!