ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ.
ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅದ್ದೂರಿಯಾಗಿ ಚಾಲನೆ ನೀಡಿದ್ದು, ಸಾಹಿತ್ಯ ಸಮ್ಮೇಳನವನ್ನು ಕಣ್ತುಂಬಿಕೊಳ್ಳಲು ಸುಮಾರು ಬೆಳಿಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಆಗಮಿಸಿದ್ದಾರೆ.
ಈ ಸಾಹಿತ್ಯ ಸಮ್ಮೇಳನಕ್ಕೆ ಅಪಾರ ಜನರ ನೀರಿಕ್ಷೆಯ ಆಧಾರದ ಮೇಲೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಏರ್ಪಡಿಸಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆಯಿಂದ ಹಾಗೂ ಮಂಡ್ಯ ನಗರಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿರುವುದರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನಸಾಗರ ಹರಿದು ಬಂದಿದೆ. ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮತ್ತು ನಗರದ ಬಹುತೇಕ ವಿದ್ಯಾರ್ಥಿಗಳು, ಉಪನ್ಯಾಕರು ಹಾಗೂ ಶಿಕ್ಷಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.
ಇನ್ನು ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಸಮ್ಮೇಳನದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂಬ ಕಾರಣಕ್ಕೆ ಮುನ್ನಚ್ಚೆರಿಕೆ ಕ್ರಮವಾಗಿ ಜಿಲ್ಲಾ ಪೊಲೀಸದ್ ಇಲಾಖೆ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸುಮಾರು 3,200 ಪೊಲೀಸ್ ಸಿಬ್ಬಂದಿಯನ್ನು ಈ ಸಾಹಿತ್ಯ ಸಮ್ಮೇಳನಕ್ಕಾಗಿ ನಿಯೋಜಿಸಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…