Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪರಿಸರ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಗೆ ಚಾಲನೆ: ಡಾ ಎಚ್ ಎಲ್ ನಾಗರಾಜ್

ಮಂಡ್ಯ:  ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.‌೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾ ಗೆ ಚಾಲನೆ ನೀಡಿದರು.

ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಸಲುವಾಗಿ ವಿಶ್ವ ಪರಿಸರದ ದಿನದ ಅಂಗವಾಗಿ ಎಲ್ಲಾ ಕಡೆಯಲ್ಲೂ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಯುವ ಜನತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಗಿಡಗಳನ್ನು ನೆಡಬೇಕು. ಸೈಕಲ್ ಜಾಥಾ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದರು.

ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿರುವುದು. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು ಎಂದರು.

ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್ ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು ಎಂದು ಹೇಳಿದರು.

ಜಾಥಾ ಕಾರ್ಯಕ್ರಮದಲ್ಲಿ ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: