ಮಂಡ್ಯ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು : ಡಿಕೆಶಿ ಪರ ನಿಶ್ಚಲಾನಂದನಾಥ ಸ್ವಾಮೀಜಿ ಬ್ಯಾಟಿಂಗ್

ಮಂಡ್ಯ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಹಂಬಲ ಬಹಳ ದಿನಗಳಿಂದ ಇದೆ. ಕೇವಲ ಒಕ್ಕಲಿಗರಲ್ಲದೆ ಅವರ ಇತರೆ ಅಭಿಮಾನಿಗಳ ಆಗ್ರಹವೂ ಆಗಿದೆ ಎಂದು ವಿಶ್ವ ಒಕ್ಕಲಿಗರ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಡಿಕೆಶಿ ಪರ ಬ್ಯಾಟಿಂಗ್ ಬೀಸಿದ್ದಾರೆ.

ನಗರದ ಬಾಲಗಂಗಾಧರನಾಥ ಸಮುದಾಯ ಭವನದಲ್ಲಿ ಮಂಡ್ಯ ಜಿಲ್ಲಾ ಚುಂಚಶ್ರೀ ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಶುಕ್ರವಾರ ನಡೆದ ಸಾಮೂಹಿಕ ಮಹಾಲಕ್ಷ್ಮಿ ಆಷಾಡ ಮಾಸದ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ದುಡಿದಿದ್ದಾರೆ. ಅವರೊಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷ 135 ಸ್ಥಾನ ಗಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಬರಲು ಅವರು ಕಾರಣಕರ್ತರಾಗಿದ್ದಾರೆ. ಪಕ್ಷವನ್ನ ತಾಯಿ ರೀತಿ ಪ್ರೀತಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಕಾದು ನೋಡೋಣ, ಡಿ.ಕೆ. ಶಿವಕುಮಾರ್ ಖಂಡಿತ ಸಿಎಂ ಆಗೇ ಆಗ್ತರೆ. ಅವರು ಸಂಯಮ ವರ್ತಿಗಳು, ಶಿಸ್ತಿನ ಸಿಪಾಯಿ. ಅವರು ತಾಳ್ಮೆಯಿಂದ ಕಾದು, ಹೈಕಮಾಂಡ್‌ನಿಂದ ಅಧಿಕಾರ ಪಡೆಯುತ್ತಾರೆ ಎಂಬ ನಂಬಿಕೆ ಇದೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಈ ಭಾಗದಲ್ಲಿ ಡಿಕೆಶಿ ಪರ ಹೆಚ್ಚು ಒಲವು ತೋರಿದ್ದರಿಂದ 135 ಸ್ಥಾನ ಬರಲು ಕಾರಣವಾಯಿತು ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago