Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ತಂಬಾಕು ಮುಕ್ತ ಯುವ ಅಭಿಯಾನ 2.0 ಗೆ ಡಿಸಿ ಡಾ ಕುಮಾರ ಚಾಲನೆ

ಮಂಡ್ಯ: ಜಿಲ್ಲೆಯಾದ್ಯಂತ ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸಲು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ ಆ ಮೂಲಕ ಉತ್ತಮ ಯುವಜನರನ್ನು ಕಾಣುವ ಉದ್ದೇಶದಿಂದ ದೇಶದಾದ್ಯಂತ 24 ಸೆಪ್ಟೆಂಬರ್ 2024 ರಿಂದ 23 ನವೆಂಬರ್ 24ರ ವರೆಗೆ 60 ದಿನಗಳ ಕಾಲ ಹಮ್ಮಿಕೊಂಡಿರುವ ತಂಬಾಕು ಮುಕ್ತ ಯುವ 2.0 ಅಭಿಯಾನವನ್ನು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಚಾಲನೆ ನೀಡಿದರು.

ತಂಬಾಕು ಮುಕ್ತ ಯುವ 2.0 ಅಭಿಯಾನದ ಬಗ್ಗೆ ಉದ್ದೇಶ ಹಾಗೂ ಕ್ರಮಗಳು

ತಂಬಾಕು ಮುಕ್ತ ಯುವ 2.0 ಅಭಿಯಾನದ ಅವಧಿಯಲ್ಲಿ ರಾಜ್ಯದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಪಂಚಾಯತ್ ರಾಜ್ ಇಲಾಖೆಯಿಂದ ಕನಿಷ್ಟ 20 ಗ್ರಾಮಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಮೂಲಕ ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲು ಕ್ರಮ ಕೈಗೊಳ್ಳವುದು.

ಆರಕ್ಷಕ ಇಲಾಖೆಯಿಂದ ಪ್ರತಿ ಠಾಣೆಯಿಂದ ಪ್ರತಿವಾರ ಕನಿಷ್ಠ ಎರಡು ಬಾರಿ ಕೋಟ್ಪಾ ಕಾರ್ಯಚರಣೆ ನಡೆಸಿ ಸೆಕ್ಷನ್ 4,5,6ಎ, 6ಬಿ, 7,8,9 ಅಡಿಯಲ್ಲಿ ಪ್ರಕರಣ ದಾಖಲಿಸಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.

ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಶೇಕಡ ನೂರರಷ್ಟು ತಂಬಾಕು ಮುಕ್ತಗೊಳಿಸಲು ಆ ಮೂಲಕ ತಂಬಾಕು ಮುಕ್ತ ಯುವಜನರನ್ನು ನಾಡಿಗೆ ನೀಡಲು ಸೂಚಿಸುತ್ತಾ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮಕ್ಕಳಿಗೆ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ಅರಿವು ಮೂಡಿಸುವುದು.

ವಿವಿಧ ಇಲಾಖೆಗಳು ಕಾರ್ಯಕ್ರಮ ಕೈಗೊಂಡು ವಿದ್ಯಾರ್ಥಿಗಳನ್ನು ಹಾಗೂ ಯುವ ಜನರನ್ನು ತಂಬಾಕು ಮುಕ್ತ ಜೀವನ ನಡೆಸಲು ಪ್ರೇರೇಪಿಸುವುದು.

ನಗರಾಭಿವೃದ್ಧಿ ಇಲಾಖೆ ವತಿಯಿಂದ ತಂಬಾಕು ಮಾರಾಟ ಪರವಾನಗಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ನೂತನ ನಿಯಮಾವಳಿಗಳನ್ನು ಜಾರಿಗೊಳಿಸಿ ತಂಬಾಕು ಮಾರಾಟ ಪರವಾನಿಗೆಯನ್ನು ಆರಂಭಿಸುವುದು.

ನಗರಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಸವಿಲೇವಾರಿ ವಾಹನಗಳ ಮೂಲಕ ಪ್ರತಿನಿತ್ಯ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆಯೂ ಕೂಡ ಜಿಂಗಲ್ಸ್ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು.

ಜಿಲ್ಲೆಯ ಹೆಮ್ಮೆಯ ಶ್ರೀರಂಗಪಟ್ಟಣ ದಸರಾ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ತಂಬಾಕು ಮುಕ್ತ ಕಾರ್ಯಕ್ರಮವನ್ನಾಗಿಸಲು ಆ ಮೂಲಕ ಮಂಡ್ಯ ಜಿಲ್ಲೆಯನ್ನು ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ದೇಶಕ್ಕೆ ಮಾದರಿಯನ್ನಾಗಿಸಲು ಜಿಲ್ಲೆಯ ನಾಗರೀಕರು ಜಿಲ್ಲಾಡಳಿತದೊಡನೆ ಕೈಜೋಡಿಸಬೇಕು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮೋಹನ್ ಕೆ, ಜಿಲ್ಲಾ ಅಬಕಾರಿ ಉಪಯುಕ್ತರು, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಾದ ಡಾ.ಕುಮಾರ್.ಹೆಚ್, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸೋಮಶೇಖರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್ ಶಿವರಾಮೇಗೌಡ, ಜಿಲ್ಲೆಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಮರಿಗೌಡ ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: