Mysore
24
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

ಬಾಲಕಿಯರ ಕ್ರೀಡಾ ವಸತಿ ನಿಲಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾ ಕ್ರೀಡಾಂಗಣದ  ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು.

ಬಳಿಕ ಕರ್ನಾಟಕ ಸಂಘದಲ್ಲಿರುವ ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಘಟಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್, ನಗರಸಭೆ ಆಯುಕ್ತ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

 

Tags: