Mysore
15
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಅನಾರೋಗ್ಯದ ಮಧ್ಯೆಯೂ ಜನರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ

ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು.

ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಅವರು ಭರವಸೆ ನೀಡಿದರು.

ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು.

Tags:
error: Content is protected !!