Mysore
24
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ

DCM D.K. Shivakumar's escort vehicle overturns

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಡಿವೈಡರ್‌ಗೆ ವಾಹನ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Tags:
error: Content is protected !!