ಮಂಡ್ಯ

ಡಿಸಿಎಂ ಡಿಕೆಶಿ ಯಾವ ಸಂದರ್ಭದಲ್ಲಾದರೂ ಸಿಎಂ ಆಗಬಹುದು: ಶಾಸಕ ರವಿ ಗಣಿಗ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭ ಬಂದೇ ಬರುತ್ತದೆ. ಈ ಅವಧಿಯಲ್ಲೇ ಕನಸು ಈಡೇರಲಿದೆಯೇ ಅಥವಾ ಮುಂದಿನ ಅವಧಿವರೆಗೂ ಕಾಯಬೇಕೆ ಎಂಬ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸುತ್ತದೆ. ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳನ್ನು ವರಿಷ್ಠ ನಾಯಕರು ಶೀಘ್ರವೇ ಬಗೆಹರಿಸಬೇಕು ಎಂದು ಒತ್ತಾಯಿಸಿದ ಅವರು, ಬಿಜೆಪಿಯಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿಯವರನ್ನು ಬದಲಾಯಿಸಿದ್ದಾರೆ. ಅಲ್ಲೆಲ್ಲಾ ಗೊಂದಲಗಳಿವೆ. ನಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.

ಕೆಲವು ಹಿರಿಯ ಶಾಸಕರು ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಿ ಮತ್ತು ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ, ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಇಲ್ಲ ಎಂದು ಯಾರೂ ಮಾತನಾಡಿಲ್ಲ. ಕೆಲವರು ಸಚಿವರು ಒಟ್ಟಿಗೆ ಸೇರಿ ಊಟ ಮಾಡಿದರೆ, ಅದನ್ನು ಸಿದ್ದರಾಮಯ್ಯ ಅವರ ಬಣ ಎನ್ನಲಾಗುತ್ತಿದೆ. ನಾವು ನಮ್ಮದೇ ಕೆಲಸಕ್ಕೆ ದೆಹಲಿಗೆ ಹೋದರೆ ಡಿ.ಕೆ.ಶಿವಕುಮಾರ್ ಬಣ ಎನ್ನುತ್ತಾರೆ. ಇದೆಲ್ಲ ಮಾಧ್ಯಮಗಳು ಸೃಷ್ಟಿಸುತ್ತಿರುವ ಅನಗತ್ಯ ಗೊಂದಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಶೋಷಿತ ವರ್ಗಗಳು ಸುಮ್ಮನಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ನಾಯಕ ರಾಮಚಂದ್ರಪ್ಪ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಅವರು ಕಾಲಕಾಲಕ್ಕೆ ಇಂಥ ಮಾತುಗಳನ್ನು ಆಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಒಕ್ಕಲಿಗ ಸಮುದಾಯ ಬೆಂಬಲ ನೀಡಿದ್ದಕ್ಕಾಗಿಯೇ ಮಂಡ್ಯ ಜಿಲ್ಲೆಯಲ್ಲಿ ಆರು ಮಂದಿ ಶಾಸಕರು ಗೆದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ಅದನ್ನು ತಪ್ಪು ಎಂದು ಪ್ರತ್ಯುತ್ತರಿಸುವ ಅಗತ್ಯವಿಲ್ಲ ಎಂದರು.

ಸಚಿವ ಸತೀಶ್ ಜಾರಕಿಹೊಳಿಯವರು ನಾನು ಸಿದ್ದರಾಮಯ್ಯ ಬಣ ಎಂದು ಹೇಳಿಲ್ಲ. ನಾನು ಡಿ.ಕೆ.ಶಿವಕುಮಾರ್ ಬಣ ಎಂದು ತಿಳಿಸಿಲ್ಲ. 140 ಮಂದಿ ಶಾಸಕರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣದಲ್ಲೇ ಇದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಆರಂಭದಿಂದಲೂ ಹೇಳುತ್ತಲೇ ಇದ್ದೇವೆ. ದೇವರ ಇಚ್ಛೆಯಲ್ಲಿ ಯಾವಾಗ ಆಗಬೇಕು ಎಂದಿದೆಯೋ ಆಗ ಆಗುತ್ತದೆ. ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಬಯಕೆ. ಹಾಗೆಂದು ಉತ್ತಮವಾಗಿ ಕೆಲಸ ಮಾಡುತ್ತಿರುವ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಹಾಗೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

20 mins ago

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

38 mins ago

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

1 hour ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

2 hours ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

3 hours ago