ಮಂಡ್ಯ

ಅಥ್ಲೆಟಿಕ್ಸ್‌ ಸಾಧಕಿ ವಿಜಯಕುಮಾರಿಗೆ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಒಡಿಶಾದ ಭುವನೇಶ್ವರದಲ್ಲಿ‌ ಆಗಸ್ಟ್‌ 10 ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 337ರಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅಥ್ಲೆಟಿಕ್ಸ್ ನಲ್ಲಿ ನನಗೆ ಹೆಚ್ಚಿನ ಆಸಕ್ತಿ. ಹೀಗಾಗಿ ವಿಜಯಕುಮಾರಿ ಅವರ ಸಾಧನೆ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಗಮನಿಸಿ ನಮ್ಮ ಮಂಡ್ಯದ ಸಾಧಕಿಗೆ ಅಭಿನಂದಿಸಲಾಗುತ್ತಿದೆ. ಈಕೆಯ ಸಾಧನೆಗೆ ನನ್ನ ಸಂಪೂರ್ಣ ಸಹಕಾರ ನೆರವು ಇರಲಿದೆ ಎಂದರು.

ಮಂಡ್ಯದ ಹೆಣ್ಣುಮಗಳು ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ. ಆಕೆಯ ತರಬೇತಿಗೆ ಬೇಕಾದ ಸಕಲ ವ್ಯವಸ್ಥೆ ಮಾಡಲಾಗುವುದು. ಹಣಕಾಸಿನ ಸಮಸ್ಯೆ ಇದೆ ಎಂದು ತಿಳಿದು ಪಾಲಿಕೆ ವತಿಯಿಂದ 10 ಲಕ್ಷ ರೂ. ಪ್ರೋತ್ಸಾಧನ ನೀಡಲಾಗುವುದು. ಈ ವರ್ಷದ 5 ಲಕ್ಷ ರೂ. ಚೆಕ್ ಅನ್ನು ನೀಡಲಾಗಿದ್ದು ಮುಂದಿನ ವರ್ಷ 5 ಲಕ್ಷ ರೂ. ನೀಡುವುದಾಗಿ ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ವಿಜಯಕುಮಾರಿ, ನನ್ನ ಸಾಧನೆಯನ್ನು ಗುರುತಿಸಿ ಸನ್ಮಾನಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಾಸಕರಾದ ದಿನೇಶ್ ಗೂಳಿಗೌಡರವರಿಗೆ ಧನ್ಯವಾದಗಳು. ಇದರಿಂದ ಮತ್ತಷ್ಟು ಸಾಧನೆ ಮಾಡಲು ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಉಮ್ಮಸ್ಸು ಹಿಮ್ಮಡಿಯಾಗಿದೆ ಎಂದು ಹೇಳಿದರು.

5 ಲಕ್ಷ ರೂ. ಚೆಕ್ ಹಸ್ತಾಂತರ
ವಿಜಯಕುಮಾರಿ ಅವರ ಸಾಧನೆಯನ್ನು ಮೆಚ್ಚಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಪಾಲಿಕೆ ವತಿಯಿಂದ 10 ಲಕ್ಷ ರೂ. ನೀಡುವುದಾಗಿ ಘೋಷಿಸಿ 5 ಲಕ್ಷ ರೂ. ಚೆಕ್‌ ಅನ್ನು ವಿಜಯಕುಮಾರಿ ಅವರಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಐದು ಲಕ್ಷ ರೂ.ನ ಚೆಕ್ ನೀಡುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು.

ವೈಯಕ್ತಿಕ ವಿವರ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಕೃಷಿ ಕುಟುಂಬದಲ್ಲಿ ಜನಿಸಿದ ವಿಜಯಕುಮಾರಿ ಅವರು ರಾಜ್ಯದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಇವರ ಈ ಸಾಧನೆ ರಾಜ್ಯದ ಇತರೆ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

400 ಮೀಟರ್ ಸ್ಪರ್ಧೆಯಲ್ಲಿ 53.40 ಸೆಕೆಂಡ್ ಗಳಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದ್ದಾರೆ. ಕಡುಕಷ್ಟದಲ್ಲಿ ಬೆಳೆದು ಅಪ್ರತಿಮ ಸಾಧನೆ ಮಾಡಿರುವ ವಿಜಯಕುಮಾರಿ ಅವರ ತಂದೆ ಕುಮಾರ ಅವರು ಕೃಷಿಕರಾಗಿದ್ದರೆ ತಾಯಿ ಪ್ರೇಮ ಗೃಹಿಣಿ. ಪತಿ ತರುಣ್ ಶೇಖರ್ ಅವರು ಕ್ರೀಡಾ ತರಬೇತುದಾರರು.

ಶಾಲಾ ದಿನಗಳಲ್ಲಿ ಅತ್ಯುತ್ತಮ ಕ್ರೀಡಾಪಟು ಆಗಿದ್ದ ವಿಜಯಕುಮಾರಿ ಅವರು 16ನೇ ವಯಸಿಗೆ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI)ಗೆ ಆಯ್ಕೆಯಾದರು. ಬಳಿಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ನಿರಂತರ ಅಭ್ಯಾಸ ಸತತ ಪರಿಶ್ರಮದಿಂದ ಚಿನ್ನದ ಪದಕ ಪಡೆದಿರುವ ವಿಜಯಕುಮಾರಿ ಅವರು ಮುಂದೆ ಕಾಮನ್‌ವೆಲ್ತ್ ಏಷಿಯನ್ ಗೇಮ್ಸ್ ಗೆ ಆಯ್ಕೆಯಾಗಿ ಭಾರತದ ಕೀರ್ತಿ ಪತಾಕೆ ಹಾರಿಸುವ ಇಂಗಿತ ಹೊಂದಿದ್ದಾರೆ.

ಸಾಧನೆಗಳು

2014ರಲ್ಲಿ LUSOFONIA ಗೇಮ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ನಲ್ಲಿ ಬೆಳ್ಳಿ ಪದಕ
2014ರಲ್ಲಿ ಏಷಿಯನ್ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ
2019ರಲ್ಲಿ ಸೌತ್ ಏಷಿಯನ್ ಗೇಮ್ಸ್ ನಲ್ಲಿ 400 ಮೀಟರ್ ನಲ್ಲಿ ಕಂಚಿನ ಪದಕ
2025 ಆಗಸ್ಟ್ 10ರಂದು ಭುವನೇಶ್ವರದಲ್ಲಿ ನಡೆದ ವಿಶ್ವ ಅಥ್ಲಿಟಿಕ್ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ
ಇದರ ಜೊತೆಗೆ ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ಗಳಿಸಿದ್ದಾರೆ.

ಪ್ರಶಸ್ತಿಗಳು

ವಿಜಯಕುಮಾರಿ ಅವರಿಗೆ ಈಗಾಗಲೇ ಏಕಲವ್ಯ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ, ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿ, ಮಂಡ್ಯ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

10 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago