ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ಸದಸ್ಯ ಇಂಡುವಾಳು ಚಂದ್ರಶೇಖರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ‍್ಯ ಪೂರ್ವದಿಂದಲೂ ಜಿಲ್ಲೆಯ ಜನರು ಸ್ವಾತಂತ್ರ‍್ಯ ಚಳುವಳಿಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಮುಖ ನೀರಾವರಿ ಚಳುವಳಿಗಳಲ್ಲಿ ಹಾಗೆಯೇ ರಾಷ್ಟ್ರ ರಾಜಕಾರಣದಲ್ಲೂ ಭಾಗವಹಿಸಿ ಹೆಸರು ಮಾಡಿದ್ದಾರೆ. ಇಂತಹ ಜಿಲ್ಲೆಯ ಜನಗಳನ್ನು ಛತ್ರಿಗಳು ಎಂದಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಜಿಲ್ಲೆಯನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕರು ಈ ಬಗ್ಗೆ ಒಂದು ಮಾತನ್ನು ಆಡದಿರುವುದು ವಿಪರ್ಯಾಸ. ಶಿವಕುಮಾರ ಅವರಿಗೆ ಈ ಬಗ್ಗೆ ತಿಳಿಸಿ ಸ್ಪಷ್ಟನೆ ನೀಡುವ ಕೆಲಸವನ್ನು ಸಹ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸೋಮವಾರದೊಳಗೆ ಕ್ಷಮೆ ಕೇಳದಿದ್ದರೆ ಜಿಲ್ಲೆಗೆ ಬಂದರೆ ಕಪ್ಪು ಬಾವುಟ ಪ್ರದರ್ಶಿಸಿ ಬಹಿಷ್ಕಾರ ಹಾಕಲಾಗುವುದು ಎಂದು ಎಚ್ಚರಿಸಿದರು.
ಮಾರ್ಚ್ 25 ಕ್ಕೆ ಛತ್ರಿ ಮೆರವಣಿಗೆ
ಇದೇ ಮಾ.24 ರ ಸೋಮವಾರ ಸಂಜೆಯೊಳಗೆ ಕ್ಷಮಾಪಣೆ ಕೇಳದಿದ್ದರೆ ಮಾರ್ಚ್ 25ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಸಂಜಯ ಸರ್ಕಲ್‌ವರೆಗೆ ಛತ್ರಿಗಳನ್ನು ಹಿಡಿದು ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು, ರೈತರು, ಸಂಘ-ಸಂಸ್ಥೆಗಳ ಮುಖಂಡರು ಛತ್ರಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಗೋಷ್ಠಿಯಲ್ಲಿ ಮುಖಂಡರಾದ ಶಿವಳ್ಳಿ ಚಂದ್ರು, ಶಂಭೂನಹಳ್ಳಿ ಸುರೇಶ, ಬೋರಲಿಂಗೇಗೌಡ ಪಣಕನಹಳ್ಳಿ, ಹಲ್ಲೆಗೆರೆ ಶಿವರಾಂ, ಹೊಳಲು ಸಂತೋಷ್,ಇಂಡುವಾಳು ಸಿದ್ದೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್‌ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…
ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್…
ಬೆಂಗಳೂರು: ನಟ ಶಿವರಾಜ್ ಕುಮಾರ್-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…