ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ ಹಾಗೂ ಚಂದ್ರು ಎಂಬುವವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಟೋಲ್ ತಪ್ಪಿಸಲು ಕಾರು ಸರ್ವಿಸ್ ರಸ್ತೆಗೆ ಇಳಿಯುವ ಸಂದರ್ಭದಲ್ಲಿ ಹಿಂಬದಿಯಿಂದ ಕೆಎಸ್ಆರ್’ಟಿಸಿ ಬಸ್ಸು ಟಾಟಾ ಪಂಚ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…