ಮಂಡ್ಯ

ಸಾಲಭಾದೆ : ಯುವಕ ಆತ್ಮಹತ್ಯೆ, ಮಗನ ಸಾವಿನ ಸುದ್ದಿ ತಿಳಿದ ತಾಯಿಗೆ ಹೃದಯಾಘಾತ!

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿ ಶಿವಮ್ಮ ಅವರಿಗೂ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಗ್ರಾಮದ ಸತ್ಯ ಶಿವಮ್ಮ ದಂಪತಿಯ ಪುತ್ರ ಸತೀಶ್ (ತೇರಿ)(39) ಆತ್ಮಹತ್ಯೆ ಮಾಡಿಕೊಂಡವರು.

ಸತೀಶ್ ಹಲವಾರು ವರ್ಷಗಳಿಂದ ಸಾಲಮಾಡಿಕೊಂಡು ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಾಲಗಾರರ ಕಾಟ ತಾಳಲಾರದೆ ಜೀವನದಲ್ಲಿ ಸಾಕಷ್ಟು ನೊಂದು ಜುಗುಪ್ಸೆಗೊಂಡಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಕುತ್ತಿಗೆ ಭಾಗವನ್ನು ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ತಾಯಿ ಶಿವಮ್ಮ ಮನೆಗೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸತೀಶ್‌ನನ್ನು ತಕ್ಷಣ ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ತಾಯಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತರ ತಾಯಿ ಶಿವಮ್ಮ ಅವರ ಹೇಳಿಕೆ ಆಧರಿಸಿ ಪಾಂಡವಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರದಲ್ಲಿ ಪಂಚನಾಮೆ ನಡೆಸಿ ಭಾನುವಾರ ಬೆಳಿಗ್ಗೆ ವಾರಸುದಾರರಿಗೆ ಹಸ್ತಾಂತರಿಸಿದರು. ಮಧ್ಯಾಹ್ನ ಚಿಕ್ಕಮರಳಿ ಗ್ರಾಮದ ಹೊರವಲಯದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

10 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

10 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

10 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

10 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

10 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

11 hours ago