ಮಂಡ್ಯ

ಸಾಕಾರಗೊಂಡ ದಶಕಗಳ ಕನಸು: ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ

ಮಂಡ್ಯ: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ.

ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಶ್ರಮದಿಂದ  ಸಕಾರಗೊಂಡಿದೆ.

ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನಗಳು ವಿಶ್ವವಿದ್ಯಾಲಯವು 2013 ರಿಂದ ರೈತರ ಆಶೋತ್ತರಗಳಿಗೆ ಪೂರಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲೇ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಅತೀ ಅವಶ್ಯವಾಗಿದ್ದು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ದೊರೆತಿದೆ.

ನೂತನವಾಗಿ ಪ್ರಾರಂಭಿಸುವ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜುಗಳು ಹಾಗೂ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಮಂಡ್ಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತಿವೆ

ನೂತನವಾಗಿ ಪ್ರಾರಂಭಗೊಳ್ಳುವ ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಗೊಳ್ಳುತ್ತವೆ, ಕಾರಣ ಈ, ಜಿಲ್ಲೆಗಳಲ್ಲಿ ಇರುವ ಯಾವುದೇ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಘಟಕಗಳು ಯಥವತ್ತಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತವೆ.

ಶಿವಮೊಗ್ಗ ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಮಾದರಿಯಲ್ಲಿ ಮಂಡ್ಯದಲ್ಲಿ ಪ್ರಾರಂಭಿಸುವ ನೂತನ ಕೃಷಿ ವಿಶ್ವವಿದ್ಯಾಲಯವನ್ನು ಕೂಡಾ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸಿ ಮಂಡ್ಯ ಸಮಗ್ರ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನೂತನ ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸಬೇಕಾದ ಸಂಸ್ಥೆಗಳು
ಮಂಡ್ಯ ಜಿಲ್ಲೆಯ ಸಂಸ್ಥೆಗಳು-ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1. ಕೃಷಿ ಕಾಲೇಜು, ಮಂಡ್ಯ
2. ವಲಯ ಕೃಷಿ ಸಂಶೋಧನಾ ಕೇಂದ್ರ, ಮಂಡ್ಯ
3. ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಮಂಡ್ಯ
4. ಕೃಷಿ ಡಿಪ್ಲೊಮಾ
5. ಬೆಲ್ಲದ ಪಾರ್ಕ್, ಮಂಡ್ಯ
6. ಭತ್ತ
7. ಮೇವು ಬೆಳೆಗಳು ಮತ್ತು ಬಳಕೆ
8. ಕಬ್ಬು
9. ಸಣ್ಣ ರಾಗಿ
10. ಫಾರ್ಮ್ ಇಂಪ್ಲಿಮೆಂಟ್ ಮತ್ತು ಮೆಷಿನರಿ
11. ಮೆಕ್ಕೆ ಜೋಳ
12. Water Technology Centre
13. ಬೀಜ ಘಟಕ
14.ಕೃಷಿ ವಿಸ್ತರಣಾ ಶಿಕ್ಷಣ ಘಟಕ

ಮೈಸೂರು ಜಿಲ್ಲೆಯ ಸಂಸ್ಥೆಗಳು-ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1) ಸಾವಯವ ಕೃಷಿ ಸಂಶೋಧನಾ ಕೇಂದ್ರ, ನಾಗೇನಹಳ್ಳಿ, ಮೈಸೂರು
2) ವಿಸ್ತರಣಾ ಶಿಕ್ಷಣ ಘಟಕ, ನಾಗೇನಹಳ್ಳಿ, ಮೈಸೂರು

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1) ತೋಟಗಾರಿಕೆ ಕಾಲೇಜು, ಮೈಸೂರು
2) HREC, ಮೈಸೂರು

ಕೊಡಗು ಜಿಲ್ಲೆಯ ಸಂಸ್ಥೆಗಳು- ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1. ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ
2. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಪೊನ್ನಂಪೇಟೆ
3. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಮಡಿಕೇರಿ
4. ಭತ್ತ
5. ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ

ಹಾಸನ ಜಿಲ್ಲೆಯ ಸಂಸ್ಥೆಗಳು -ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ:-
1. ಕೃಷಿ ಮಹಾವಿದ್ಯಾಲಯ, ಹಾಸನ, ಕಾರೆಕೆರೆ B.Sc (Hons). ಕೃಷಿ B.Tech (Bio Technology), B.Tech (Food Technology)
2. ಕೃಷಿ ವಿಜ್ಞಾನ ಕೇಂದ್ರ(ಏಗಿಏ), ಕಂದಿ ್ಲ (ಹಾಸನ)
3. ಕೃಷಿ ಸಂಶೋಧನಾ ಕೇಂದ್ರ, ಗುಂಜೇವು, ಹೊಳೆನರಸೀಪುರ ತಾ.
4. ಕೃಷಿ ಸಂಶೋಧನಾ ಕೇಂದ್ರ, ಮಡೆನೂರು (ಹಾಸನ)
5. ಜೈವಿಕ ಇಂಧನ ಸಂಶೋಧನಾ ಕೇಂದ್ರ, ಹಾಸನ

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ
1. AICRP (ತಾಳೆಗಳು), ಅರಸೀಕೆರೆ
2. ತೋಟಗಾರಿಕೆ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ(HREC), ಅರಸೀಕೆರೆ
3. HREC, ಸೋಮನಹಳ್ಳಿ ಕಾವಲ್ (ಹಾಸನ)
4. AICRP (ಆಲೂಗಡ್ಡೆ), ಹಾಸನ

ಚಾಮರಾಜನಗರ ಜಿಲ್ಲೆಯ ಸಂಸ್ಥೆಗಳು- ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ:
1. ಕೃಷಿ ಮಹಾವಿದ್ಯಾಲಯ, ಚಾಮರಾಜನಗರ (ಹರದನಹಳ್ಳಿ)
2. ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಚಾಮರಾಜನಗರ
3. AICRP (ಹತ್ತಿ)
4. AICRP (ಜೋಳ)
5. ಜೈವಿಕ ಇಂಧನ ಮಾಹಿತಿ ಕೇಂದ್ರ, ಚಾಮರಾಜನಗರ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

57 mins ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago