Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಇಳಿಕೆಯಾದ ಕೆಆರ್‌ಎಸ್‌ ನೀರಿನ ಮಟ್ಟ

ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 271 ಕ್ಯಸೆಕ್‌ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಜಲಾಶಯದಲ್ಲಿ ಇದೇ ದಿನ 108.74 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯದ ಅಚ್ಚಕಟ್ಟು ಪ್ರದೇಶದಲ್ಲಿ ಬೆಳೆದಿರುವ ಭತ್ತ ಇತರ ಬೆಳೆಗಳಿಗೆ ಕಟ್ಟು ಪದ್ದತಿಯಲ್ಲಿ ನೀರು ಹರಿಸಲಾಗುತ್ತಿದೆ. ‌‌‌

‘ಇದೇ ಮಾದರಿಯಲ್ಲಿ ನೀರು ಹರಿಸಿದರೆ ಮೇ ಅಂತ್ಯದವರೆಗೂ ಬೆಳೆಗಳಿಗೆ ನೀರು ಕೊಡಬಹುದು. ಕುಡಿಯುವ ಉದ್ದೇಶಕ್ಕೆ ಜುಲೈ ಅಂತ್ಯದವರೆಗೂ ನೀರು ಸಿಗಲಿದೆ. ಮುಂಗಾರು ಮಳೆ ಬೀಳುವ ಕಾರಣ ನೀರಿಗೆ ಅಭಾವ ಉಂಟಾಗುವುದಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್‌ ಆನಂದ್‌ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!