ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 271 ಕ್ಯಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಜಲಾಶಯದಲ್ಲಿ ಇದೇ ದಿನ 108.74 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯದ ಅಚ್ಚಕಟ್ಟು ಪ್ರದೇಶದಲ್ಲಿ ಬೆಳೆದಿರುವ ಭತ್ತ ಇತರ ಬೆಳೆಗಳಿಗೆ ಕಟ್ಟು ಪದ್ದತಿಯಲ್ಲಿ ನೀರು ಹರಿಸಲಾಗುತ್ತಿದೆ.
‘ಇದೇ ಮಾದರಿಯಲ್ಲಿ ನೀರು ಹರಿಸಿದರೆ ಮೇ ಅಂತ್ಯದವರೆಗೂ ಬೆಳೆಗಳಿಗೆ ನೀರು ಕೊಡಬಹುದು. ಕುಡಿಯುವ ಉದ್ದೇಶಕ್ಕೆ ಜುಲೈ ಅಂತ್ಯದವರೆಗೂ ನೀರು ಸಿಗಲಿದೆ. ಮುಂಗಾರು ಮಳೆ ಬೀಳುವ ಕಾರಣ ನೀರಿಗೆ ಅಭಾವ ಉಂಟಾಗುವುದಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಆನಂದ್ ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…