ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ.
ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ ಮಾಡಿದ್ದಾರೆ. 2006 ರಲ್ಲಿ ಪಾಂಡವಪುರ ಪಟ್ಟಣದಲ್ಲಿ ಒಳಚರಂಡಿ ತ್ಯಾಜ್ಯ ಘಟಕಕ್ಕಾಗಿ ರೈತ ಸತ್ಯನಾರಾಯಣ ಅವರ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಆ ವೇಳೆ ರೈತನಿಗೆ ಕಡಿಮೆ ಮೊತ್ತದ ಪರಿಹಾರ ನೀಡಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಇದರಿಂದ ಹತಾಶೆಗೊಂಡ ರೈತ ಹೆಚ್ಚಿನ ಪರಿಹಾರಕ್ಕೆ ಕೋರ್ಟ್ ಗೆ ಮೊರೆ ಹೋಗಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ 4.89 ಕೋಟಿ ಪರಿಹಾರ ನೀಡಲು ಸೂಚನೆ ನೀಡಿತ್ತು. ಆದೇಶ ನೀಡಿ 2 ವರ್ಷ ಕಳೆದರೂ ಪರಿಹಾರ ಕೊಡದೆ ವಿಳಂಬ ಮಾಡಿದ್ದರಿಂದ ಕೋರ್ಟ್ ನಲ್ಲಿ ರೈತನಿಗೆ ಎಸಿ ಕಚೇರಿ ಸ್ತಿರಾಸ್ತಿ ಜಪ್ತಿ ಮಾಡಿಕೊಡುವಂತೆ ಆದೇಶ ನೀಡಲಾಗಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ರೈತರ ಮುಂದೆ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ಮುಂದಾಗುತ್ತಿದ್ದಂತೆ ಎಸಿ ಸ್ಥಳಕ್ಕೆ ಆಗಮಿಸಿದ್ದು, ರೈತರ ಮನವೊಲಿಸಿ ಶೀಘ್ರ ಪರಿಹಾರದ ಮೊತ್ತ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿಯ ಭರವಸೆ ಮೇರೆಗೆ ರೈತರು ಪೀಠೋಪಕರಣ ಹಿಂತಿರುಗಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…