ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಲ್ ಜಲ್ ಮಿತ್ರ ಯೋಜನೆಯಡಿ 49 ಜನರು ಆಯ್ಕೆಯಾಗಿದ್ದು 47 ಫಲಾನುಭವಿಗಳು ಉತ್ತೀರ್ಣರಾಗಿರುತ್ತಾರೆ ಸದರಿ 47 ಜನರಿಗೆ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಗಿದೆ ಎಂದರು.
ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೇವಲ ತರಬೇತಿ ಮತ್ತು ಪ್ರಮಾಣ ಪತ್ರ ವಿತರಿಸಿದರೆ ಸಾಲದು. ಅವರಿಗೆ ಬ್ಯಾಂಕ್ ನ ಮೂಲಕ ಸಾಲ ಸೌಲಭ್ಯವನ್ನು ಕಲ್ಪಿಸಿ ಉದ್ಯಮ ಸೃಷ್ಟಿ ಮಾಡಲು ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.
ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 19 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. ಅದರಲ್ಲಿ 4290 ಜನರಿಗೆ ಸುಮಾರು 30 ಕೋಟಿ ಸಾಲ ಸೌಲಭ್ಯವನ್ನು ನೀಡಲಾಗಿದೆ. ಪಿ.ಎಂ ವಿಶ್ವಕರ್ಮ ಯೋಜನೆ ಬಡ ಜನರಿಗೆ ಕೌಶಲ್ಯದ ತರಬೇತಿ ನೀಡಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದು. ಅಧಿಕಾರಿಗಳು ಸದರಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಎಂದು ಹೇಳಿದರು.
ಇದನ್ನು ಓದಿ: ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್ ಕಾಟ ; ಎಫ್‌ಐಆರ್ ದಾಖಲು
ಯುವನಿಧಿ ಪ್ಲಸ್ ಕುರಿತು ಜಾಗೃತಿ ಮೂಡಿಸಿ
ಯುವನಿಧಿ ಪ್ಲಸ್ ಯೋಜನೆಯಡಿ ಜಿಲ್ಲೆಯ 7 ತಾಲ್ಲೂಕಿನಿಂದ 315 ನಿರುದ್ಯೋಗಿಗಳು ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ತರಬೇತಿ ಪಡೆಯಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯ ಕುರಿತು ಕಾಲೇಜುಗಳಲ್ಲಿ ಹೆಚ್ಚಿನ ಮಾಹಿತಿ ಮತ್ತು ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ನಿಧಿ ಪ್ಲಸ್ ನಲ್ಲಿ ಯುವಕರು ತರಬೇತಿ ಪಡೆಯುವಂತೆ ಮಾಡಿ ಎಂದು ತಿಳಿಸಿದರು.
ಪಿ.ಎಂ ಸ್ವ-ನಿಧಿ ಯೋಜನೆ
ಬೀದಿ ಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಪಿ.ಎಂ ಸ್ವ- ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪಿ.ಎಂ ಸ್ವ- ನಿಧಿ ಸಾಹಯ ಧನವನ್ನು ಮೂರು ಹಂತದಲ್ಲಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ರೂ 15 ಸಾವಿರ, ಎರಡನೇ ಹಂತದಲ್ಲಿ ರೂ 25 ಸಾವಿರ, ಮೂರನೇ ಹಂತದಲ್ಲಿ ರೂ 50 ಸಾವಿರ ಹಣವನ್ನು ಶೇ 7 ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು. ಸಾಲವನ್ನು ಸರಿಯಾದ ಸಮಯಕ್ಕೆ ಪಾವತಿಸುವ ಫಲಾನುಭವಿಗಳಿಗೆ ರೂ 30 ಸಾವಿರದ ವರೆಗೂ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಅಧಿಕಾರಿಗಳು ಪಿ.ಎಂ ಸ್ವನಿಧಿ ಯೋಜನೆಯನ್ನು ಅರ್ಹರಿಗೆ ತಲುಪಿಸಿ ಯೋಜನೆಯ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಘಟಕಗಳ ಜಂಟಿ ನಿರ್ದೇಶಕ ದಿನೇಶ್, ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೆರೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…