ಮಂಡ್ಯ: ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ವಿಕಲಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚೇತನ ಯೋಜನೆಯಡಿ ದಮನಿತ ಮಹಿಳೆಯರು ( ಲೈಂಗಿಕ ವೃತ್ತಿ ನಿರತ ಮಹಿಳೆಯರು) ಈಗಿರುವ ವೃತ್ತಿಯಿಂದ ಹೊರಬಂದು ಆರ್ಥಿಕ ಅಭಿವೃದ್ಧಿ ಹೊಂದಲು ಪ್ರೇರೆಪಿಸಲು ಜಿಲ್ಲೆಯಲ್ಲಿ 9 ಜನರಿಗೆ ತಲಾ ರೂ. 30000 ಧನಸಹಾಯ ನೀಡಲು ಈ ಯೋಜನೆ ರೂಪಿಸಲಾಗಿದ್ದು 23 ಜನ ಅರ್ಜಿ ಸಲ್ಲಿಸಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ, ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭೌತಿಕವಾಗಿ ಜಿಲ್ಲೆಯಲ್ಲಿ 30 ಜನರಿಗೆ ತಲಾ ರೂ 30000 ಆರ್ಥಿಕ ಚಟುವಟಿಕೆ ನಡೆಸಿ ಅಭಿವೃದ್ಧಿ ಹೊಂದಲು ಈ ಯೋಜನೆ ಪ್ರೇರೇಪಿಸುತ್ತದೆ, ಈಗಾಗಲೇ 19 ಜನ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಧನಶ್ರೀ ಯೋಜನೆಯಡಿ ಹೆಚ್. ಐ. ವಿ ಸೋಂಕಿತ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಕಾಣಲು ತಲಾ ರೂ 30000 ದಂತೆ 14 ಸೋಂಕಿತ ಮಹಿಳೆಯರಿಗೆ ಯೋಜನೆ ತಲುಪಿಸುವ ಭೌತಿಕ ಗುರಿ ಹೊಂದಲಾಗಿದೆ ಎಂದರು.
ಈ ಎಲ್ಲ ಯೋಜನೆಗಳ ಪ್ರೋತ್ಸಾಹ ಧನ ಪಡೆದಿರುವ ಫಲಾನುಭವಿಗಳು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬುದರ ಕುರಿತು ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…