ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು.
ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಹಾಗೂ ಇದೇ ರೀತಿಯಾಗಿ ಜಿಲ್ಲಾದ್ಯಂತ ಇರುವ ಅಪೂರ್ಣವಾದ ಒಳಚರಂಡಿ ಕಾಮಗಾರಿಗಳನ್ನೂ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನು ಓದಿ : ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ತೂಬಿನಕೆರೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದಾಗಿ ನಿರಂತರವಾಗಿ ಹೆಚ್ಚು ಅಪಘಾತಗಳಾಗುತ್ತಿವೆ. ಅಲ್ಲದೆ
ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ತಿಳಿಸಿದರು.
ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಆರಕ್ಷಕ ಅಧಿಕ್ಷಕ ಸಿ.ಈ.ತಿಮ್ಮಯ್ಯ, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಎಂ.ಎಸ್.ಒಬಲೆ ಹಾಜರಿದ್ದರು.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…