Deputy Commissioner visits Mandya Municipal Council, inspects
ಮಂಡ್ಯ : ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಗರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ, ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರಸಭೆಯ ಕಂದಾಯ ವಿಭಾಗಕ್ಕೆ ಭೇಟಿ ನೀಡಿ ಭೇಟಿ ನೀಡಿ ‘ಎ’ ಖಾತೆ ಮತ್ತು ‘ಬಿ’ ಖಾತೆ ನೀಡುವ ಬಗ್ಗೆ ಪ್ರಗತಿಯನ್ನು ಪರಿಶೀಲಿಸಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಗುಣಮಟ್ಟವನ್ನು ಕಾಪಾಡುವಂತೆ ಸೂಚನೆ ನೀಡಿದರು.
ಸಕಾಲ ಸೇವೆಯಲ್ಲಿ ಬರುವಂತಹ ಸಾರ್ವಜನಿಕ ಸೇವೆಗಳನ್ನು ನಿಗದಿತ ಅವಧಿಯಲ್ಲಿ ನೀಡಬೇಕು. ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನ ವಿಲೇಗೊಳಿಸುವ ಸಂಬಂಧ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
‘ಎ’ ಖಾತಾ ಮತ್ತು ‘ಬಿ’ ಖಾತಾಗಳ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಒಂದು ವಾರದಲ್ಲಿ ಒಂದು ವಾರ್ಡ್‌ನಂತೆ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡುವಂತೆ ತಿಳಿಸಿದರು.
ನಗರಸಭೆ ವತಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ಮಾರುಕಟ್ಟೆ ಸಂಬಂಧ ಸೂಕ್ತ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು. ನಂತರ ಜಿಲ್ಲಾಧಿಕಾರಿಗಳು ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು, ಪೌರಾಯುಕ್ತರು ಹಾಗೂ ಇತರೆ ಸಿಬ್ಬಂದಿಗಳ ಸಭೆಯನ್ನು ನಡೆಸಿ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ನಿಗದಿತ ಅವಽಯಲ್ಲಿ ನಿಯಮಾನುಸಾರ ನೀಡುವಂತೆ ಸೂಚನೆ ನೀಡಿದರು.
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…