ಮಂಡ್ಯ

ಮಂಡ್ಯ ನಗರಸಭೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಮಂಡ್ಯ : ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಗರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ, ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ನಗರಸಭೆಯ ಕಂದಾಯ ವಿಭಾಗಕ್ಕೆ ಭೇಟಿ ನೀಡಿ ಭೇಟಿ ನೀಡಿ ‘ಎ’ ಖಾತೆ ಮತ್ತು ‘ಬಿ’ ಖಾತೆ ನೀಡುವ ಬಗ್ಗೆ ಪ್ರಗತಿಯನ್ನು ಪರಿಶೀಲಿಸಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಗುಣಮಟ್ಟವನ್ನು ಕಾಪಾಡುವಂತೆ ಸೂಚನೆ ನೀಡಿದರು.

ಸಕಾಲ ಸೇವೆಯಲ್ಲಿ ಬರುವಂತಹ ಸಾರ್ವಜನಿಕ ಸೇವೆಗಳನ್ನು ನಿಗದಿತ ಅವಧಿಯಲ್ಲಿ ನೀಡಬೇಕು. ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನ ವಿಲೇಗೊಳಿಸುವ ಸಂಬಂಧ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

‘ಎ’ ಖಾತಾ ಮತ್ತು ‘ಬಿ’ ಖಾತಾಗಳ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಒಂದು ವಾರದಲ್ಲಿ ಒಂದು ವಾರ್ಡ್‌ನಂತೆ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡುವಂತೆ ತಿಳಿಸಿದರು.

ನಗರಸಭೆ ವತಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ಮಾರುಕಟ್ಟೆ ಸಂಬಂಧ ಸೂಕ್ತ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು. ನಂತರ ಜಿಲ್ಲಾಧಿಕಾರಿಗಳು ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು, ಪೌರಾಯುಕ್ತರು ಹಾಗೂ ಇತರೆ ಸಿಬ್ಬಂದಿಗಳ ಸಭೆಯನ್ನು ನಡೆಸಿ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ನಿಗದಿತ ಅವಽಯಲ್ಲಿ ನಿಯಮಾನುಸಾರ ನೀಡುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

2 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

4 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

6 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

12 hours ago