ಮಂಡ್ಯ

ಕಾಂಗ್ರೆಸ್‌ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ : ಜೆಡಿಎಸ್‌ ಆರೋಪ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ ಘಟನೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣ್ಮರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿದ ಜೆಡಿಎಸ್‌ ಕಾನೂನು ಸುವ್ಯವಸ್ಥೆ ಕಾಪಾಡಲು ಆಗ್ರಹಸಿದೆ.

ಗೃಹ ಇಲಾಖೆ ಹೊಣೆ ಹೊತ್ತಿರುವ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ರೆಯಲ್ಲಿದೆ ಎಂದು ಟೀಕಿಸಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲ ವಿಧದಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹಿಂದಿನ ಸರ್ಕಾರಗಳ ಆಡಳಿತದಲ್ಲಿ ರೇಪ್ ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

6 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

14 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

43 mins ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

1 hour ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

3 hours ago